Breaking News

ಉಡುಪಿಯ ಹೂಡೆಯಲ್ಲಿ ರಸ್ತೆಬದಿ ನವಜಾತ ಗಂಡು ಮಗು ಪತ್ತೆ: ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಉಡುಪಿ: ಹೆತ್ತ ತಾಯಿಯೇ ರಸ್ತೆಬದಿಯಲ್ಲಿ ಮಗುವನ್ನು ತೊರೆದು ಹೋದ ಅಮಾನವೀಯ ಘಟನೆಯೊಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಸೋಮವಾರ (ಸೆಪ್ಟೆಂಬರ್ ೭) ನಡೆದಿರುವುದು ಬೆಳಕಿಗೆ ಬಂದಿದೆ. ಮನೆಗೆ ತೆರಳುವ ಕಾಲುದಾರಿಯ ರಸ್ತೆಬದಿಯಲ್ಲಿ ಕೇವಲ ಕೆಲವು ಗಂಟೆಗಳ ಹಿಂದೆಯಷ್ಟೇ ಜನಿಸಿದಂತೆ ಕಾಣುತ್ತಿದ್ದ ನವಜಾತ ಗಂಡು ಮಗುವನ್ನು ಸ್ಥಳೀಯರು ಗಮನಿಸಿದ್ದಾರೆ.

ರಸ್ತೆಬದಿಯಲ್ಲಿ ಮಗು ಬಿದ್ದಿರುವುದನ್ನು ಕಂಡ ಸ್ಥಳೀಯ ನಿವಾಸಿಗಳು ತಕ್ಷಣವೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಮಗುವನ್ನು ತಪಾಸಣೆ ನಡೆಸಿದಾಗ ಮಗುವಿನ ಹೃದಯ ಬಡಿತ ಸಕ್ರಿಯವಾಗಿರುವುದು ಕಂಡುಬಂದಿದೆ. ಮಗುವಿನ ಆರೋಗ್ಯ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: 7 ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ಹಠಾತ್ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಲ್ಪೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನು ರಸ್ತೆಬದಿಯಲ್ಲಿ ತೊರೆದು ಹೋದ ದಯಾಹೀನ ತಂದೆ-ತಾಯಿ ಅಥವಾ ವ್ಯಕ್ತಿಗಳ ಪತ್ತೆಗಾಗಿ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *