ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ನಟನ ಭೇಟಿಯಾದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ

ಮುಂಬೈ : ಬಾಲಿವುಡ್ ಜನಪ್ರಿಯ ನಟ ಟೈಗರ್ ಶ್ರಾಫ್ (Tiger Shroff) ಅವರ ಕಾರನ್ನು ಗುರಿಯಾಗಿಸಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದೆ. ಈ ದಾಳಿಯಲ್ಲಿ ನಟನ ಚಾಲಕ ಗಾಯಗೊಂಡಿದ್ದು, ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದಾರೆ ಮತ್ತು ಅವರಿಗೆ ಯಾವುದೇ ಗನ್‌ಶಾಟ್ ಗಾಯಗಳಾಗಿಲ್ಲ ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಘಟನೆಯ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಟನ ನಿವಾಸಕ್ಕೆ ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದ್ದಾರೆ.

ಘಟನೆಯ ಹಿನ್ನೆಲೆ ಏನು?:

ಫುಟ್‌ಬಾಲ್ ಪಂದ್ಯ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಟೈಗರ್ ಶ್ರಾಫ್ ಅವರ ಬಿಎಂಡಬ್ಲ್ಯು (BMW) ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ನಟ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದು, ಗನ್ ಪೌಡರ್ ಹಾಗೂ ಗಾಜಿನ ಚೂರುಗಳು ತಗುಲಿದ್ದರಿಂದ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾಳಿಯಲ್ಲಿ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಟಾಕ್ಸಿಕ್’ ಸಿನಿಮಾದ ‘ಮನಮೋಹಕ’ ಹಾಡಿಗೆ ಜೀವ ತುಂಬಿದ ಕರಾವಳಿ ಕಂಪು

ನಟನ ನಿವಾಸಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಕುಟುಂಬಕ್ಕೆ ಸಾಂತ್ವನ ಹೇಳಿ ಮುಂಬೈ ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದಾರೆ.  ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, “ಯಾವೇ ಗ್ಯಾಂಗ್ ಇರಲಿ, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಸೆಲೆಬ್ರಿಟಿಗಳು ಹಾಗೂ ಸಾಮಾನ್ಯ ಜನರ ರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ” ಎಂದು ಎಚ್ಚರಿಕೆ ನೀಡಿದ್ದಾರೆ. 1990ರ ದಶಕದ ಮಾದರಿಯಲ್ಲಿ ಭೂಗತ ಹಾಗೂ ಕ್ರಿಮಿನಲ್ ಗ್ಯಾಂಗ್‌ಗಳ ವಿರುದ್ಧ ಕಠಿಣ ಹತ್ತಿಕುಟುಕು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಪೊಲೀಸರು ಈ ಸಂಬಂಧ ತನಿಖೆಯನ್ನು ತೀವ್ರಗೊಳಿಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಸಿನಿಮಾ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ