ಬೆಂಗಳೂರಲ್ಲಿ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಆಪ್ತ ಸ್ನೇಹಿತ ವೈಶಾಕ್ ಆತ್ಮಹತ್ಯೆ!

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕ್ರಿಷಿ ತಾಪಂಡ (Krishi Thapanda) ಅವರ ಆಪ್ತ ಸ್ನೇಹಿತ ವೈಶಾಕ್ (Vaisakh) ಬೆಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊನೆಯ ಕ್ಷಣದವರೆಗೂ ನಗನಗುತ್ತಾ ಇದ್ದ ಯುವಕನ ಈ ದಾರುಣ ನಡೆ ಚಿತ್ರರಂಗ ಹಾಗೂ ಆತನ ಆಪ್ತ ವಲಯದಲ್ಲಿ ತೀವ್ರ ಕಣ್ಣೀರು ಮತ್ತು ಆಘಾತವನ್ನು ಉಂಟುಮಾಡಿದೆ.

ಘಟನೆ ನಡೆದ ಸ್ಥಳಕ್ಕೆ ತಕ್ಷಣವೇ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆದರೆ, ಪ್ರಾಥಮಿಕ ತನಿಖೆಯ ವೇಳೆ ಮನೆಯಲ್ಲಿ ಯಾವುದೇ ರೀತಿಯ ಡೆತ್‌ನೋಟ್ (Death Note) ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಆಪ್ತ ಮೂಲಗಳ ಪ್ರಕಾರ, ಮೃತ ವೈಶಾಕ್ ಕಳೆದ ಕೆಲವು ಸಮಯದಿಂದ ತೀವ್ರ ಮಾನಸಿಕ ಖಿನ್ನತೆಯಿಂದ (Depression) ಬಳಲುತ್ತಿದ್ದರು ಎನ್ನಲಾಗಿದೆ. ಇದಕ್ಕಾಗಿ ಅವರು ಈ ಹಿಂದೆ ತಜ್ಞ ವೈದ್ಯರಿಂದ ಆಪ್ತ ಸಮಾಲೋಚನೆ ಹಾಗೂ ವೈದ್ಯಕೀಯ ಚಿಕಿತ್ಸೆಯನ್ನು ಕೂಡ ಪಡೆದುಕೊಂಡಿದ್ದರು. ಇದೇ ಮಾನಸಿಕ ನೊಂದ ಉದ್ವೇಗದಲ್ಲಿ ಅವರು ಈ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

Advertisement

ಇದನ್ನೂ ಓದಿ; ವರ್ತೂರು ಸಂತೋಷ್ ‘ಹುಲಿ ಉಗುರು’ ಬೆನ್ನಲ್ಲೇ ಕಿಶನ್-ನಿವೇದಿತಾ ಗೌಡಗೆ ‘ನವಿಲುಗರಿ’ ಗಂಡಾಂತ

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ (Post-Mortem) ನಗರದ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಶವವನ್ನು ರವಾನಿಸಲಾಗಿದೆ. ಪೋಸ್ಟ್‌ಮಾರ್ಟಮ್ ವರದಿ ಕೈ ಸೇರಿದ ನಂತರವಷ್ಟೇ ಸಾವಿನ ನಿಖರ ಕಾರಣ ಏನೆಂಬುದು ಅಧಿಕೃತವಾಗಿ ಹೊರಬರಬೇಕಿದೆ. ಈ ಕುರಿತು ಪೊಲೀಸರು ಮೃತರ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *