ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್, ಪುತ್ತೂರು ವಕೀಲರ ಸಂಘ ಹಾಗೂ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಭಕ್ತಾದಿಗಳಿಗೆ ಇಂದು ಉಚಿತವಾಗಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣೆ ವ್ಯವಸ್ಥೆ ಮಾಡಲಾಗಿದೆ.
ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ವ್ಯವಸ್ಥೆಯನ್ನು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಾಯಿತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ರಸ್ತೆ ರಕ್ತಪಾತ: ಪ್ರತ್ಯೇಕ ಅಪಘಾತಗಳಲ್ಲಿ ಯುವಕ ಹಾಗೂ ಆಟೋ ಚಾಲಕ ಸಾವು!
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ. ಅವರು ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ದೇವರಾಜ್ ವೈ.ಎಚ್., ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರಾದ ಶಿವಣ್ಣ ಎಚ್.ಆರ್., ವಕೀಲರೂ ಆಗಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ರಾಜಗೋಪಾಲ್ ಬಿ., ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ವಕೀಲರ ಸಂಘದ ಸದಸ್ಯರು, ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಹಾಗೂ ದ್ವಾರಕಾ ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

