Breaking News

ಕರಾಟೆ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ಕಾಲೇಜಿಗೆ ಚಾಂಪಿಯನ್‌ಶಿಪ್; ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ–ಪಣಚ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸಮಗ್ರ ಚಾಂಪಿಯನ್‌ಶಿಪ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕರಾಟೆ ಸ್ಪರ್ಧೆ: ರಾಜ್ಯ ಮಟ್ಟಕ್ಕೆ ಇಬ್ಬರು ಆಯ್ಕೆ

ಕರಾಟೆ ಪಂದ್ಯಾವಳಿಯಲ್ಲಿ ಅಂಬಿಕಾ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡಿದ್ದು, ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಶ್ಮಿ ಆರ್.: 19 ವರ್ಷದೊಳಗಿನ 36 ಕೆ.ಜಿ.ಗಿಂತ ಕಡಿಮೆ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ.

ಆಶಿತಾ ಕೆ.ಆರ್.: 19 ವರ್ಷದೊಳಗಿನ 56 ಕೆ.ಜಿ.ಗಿಂತ ಕಡಿಮೆ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಅರ್ಹತೆ.

ರಕ್ಷಿತ್ ಎಸ್.ಎಲ್.: 19 ವರ್ಷದೊಳಗಿನ 54 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ.

ದೇವಿಕಾ ಕೆ.ಡಿ.: 19 ವರ್ಷದೊಳಗಿನ 60 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ.

ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಜ್ಞಾನೇಶ್ವರಿ ಯಾದವ್‌ಗೆ ಅಭಿನಂದನೆ: ಡಿಎಸ್‌ಪಿ ಹುದ್ದೆ, 30 ಲಕ್ಷ ರೂ. ನಗದು ಬಹುಮಾನ ಘೋಷಿಸಿದ ಸಿಎಂ

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಯ ಫಲವಾಗಿ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯವು ಜಿಲ್ಲಾ ಮಟ್ಟದ ಚಾಂಪಿಯನ್‌ಶಿಪ್‌ ಅನ್ನು ತನ್ನದಾಗಿಸಿಕೊಂಡಿದೆ. ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡವು ಅತ್ಯುತ್ತಮ ಕ್ರೀಡಾಪಟುತ್ವ ಪ್ರದರ್ಶಿಸಿ ದ್ವಿತೀಯ ಸ್ಥಾನ (ರನ್ನರ್ ಅಪ್) ಪಡೆದು ಸಾಧನೆ ಮಾಡಿದೆ.

ಖೋ-ಖೋ ತಂಡದಲ್ಲಿದ್ದ ಕ್ರೀಡಾಪಟುಗಳು ಅನುಷಿಕಾ ಎಸ್., ಶ್ರಾವಣಿ ಎಚ್.ಕೆ., ದಿಯಾ ಬಿ.ಜಿ., ಚಶ್ವಿ ಶೆಟ್ಟಿ, ಧನ್ವಂತರಿ ಎಚ್.ಎಂ., ಪೂರ್ವಿಕಾ ಎಂ., ಬಿ.ಆರ್. ಅಮೂಲ್ಯ, ತಾನ್ಯಾ ಕೆ., ಹಿತೈಷಿಣಿ ಎಸ್., ಮನ್ವಿತಾ ಎಂ. ಹಾಗೂ ಇಶಿಕಾ. ಕರಾಟೆ ಹಾಗೂ ಖೋ-ಖೋ ಪಂದ್ಯಾವಳಿಯಲ್ಲಿ ಮಿನುಗಿದ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *