Breaking News

ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಉಪಟಳ: ಅರ್ಹರಿಗೆ ಬಂದೂಕು ಪರವಾನಿಗೆ ನಿರಾಕರಿಸಬಾರದು ಎಂದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ, ಫೆ.10: ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಂದೂಕು ಪರವಾನಗಿದಾರರು ಸೋಮವಾರದಂದು ಮಂಗಳೂರು ಜಿಲ್ಲಾಧಿಕಾರಿ (DC) ದರ್ಶನ್ ಹೆಚ್.ವಿ ಅವರನ್ನು ಭೇಟಿ ಮಾಡಿ, ಬಂದೂಕು ಪರವಾನಿಗೆ ಬಗ್ಗೆ ಚರ್ಚಿಸಿದರು. ಈ ವೇಳೆ ಕೃಷಿಕರಿಗೆ ನೀಡುವ ಕೋವಿ ಪರವಾನಗಿ ನವೀಕರಣದಲ್ಲಿ ಆಗುತ್ತಿರುವ ವಿಳಂಬ ಮತ್ತು ನಿರಾಕರಣೆಯ ಬಗ್ಗೆ ದೂರು ನೀಡಲಾಯಿತು.

​ಕಾಡಂಚಿನ ಗ್ರಾಮಗಳಲ್ಲಿ ಆನೆ, ಚಿರತೆ ಮತ್ತು ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಬೆಳೆ ರಕ್ಷಣೆಗಾಗಿ ರೈತರಿಗೆ ಆಯುಧಗಳ ಅಗತ್ಯವಿದೆ. ಅರ್ಹರಿಗೆ ಪರವಾನಗಿ ನಿರಾಕರಿಸಬಾರದು ಮತ್ತು ತಂದೆಯಿಂದ ಮಗನಿಗೆ ಪರವಾನಗಿ ವರ್ಗಾವಣೆ ಮಾಡುವಾಗಲೂ ತಾಂತ್ರಿಕ ಕಾರಣ ನೀಡಿ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
​ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಇದೆ. ಕೇವಲ ಈ ಜಿಲ್ಲೆಯಲ್ಲಿ ಮಾತ್ರ ಪರವಾನಗಿ ನೀಡಲು ಕಟ್ಟುನಿಟ್ಟಿನ ನಿಯಮಗಳನ್ನು ಹೇರಲಾಗುತ್ತಿದೆ ಎಂದು ಪರವಾನಗಿದಾರರ ಒಕ್ಕೂಟದ ಸಂಚಾಲಕ ಜಯಪ್ರಸಾದ್ ಜೋಶಿ ಆರೋಪಿಸಿದ್ದಾರೆ.

Advertisement

ಇದನ್ನೂ ಓದಿ: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಯಾವುದೇ ಕಾರಣವಿಲ್ಲದೆ ಅರ್ಜಿಗಳನ್ನು ನಿರಾಕರಿಸಿಲ್ಲ, ಪೊಲೀಸ್ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇನ್ನು ಬಾಕಿ ಇರುವ ಅರ್ಜಿಗಳನ್ನು ಗಮನಹರಿಸಿ, ಒಂದು ತಿಂಗಳೊಳಗೆ ಕಂದಾಯ, ಪೊಲೀಸ್ ಮತ್ತು ಅರಣ್ಯ ಇಲಾಖೆಯ ವರದಿ ಪಡೆದು ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು