ಅರಂತೋಡು: ಗ್ರಾಮಸ್ಥರ ಬಹುವರ್ಷಗಳ ಕನಸಾಗಿದ್ದ ಅರಂತೋಡು ಗ್ರಾಮದ ಅರಮನೆಗಯ–ಬಲ್ನಾಡು–ಮರ್ಕಂಜ ಸಂಪರ್ಕ ಸೇತುವೆಯನ್ನು ಸ್ಥಳೀಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಸಾರ್ವಜನಿಕ ಬಳಕೆಗೆ ಸಮರ್ಪಿಸಿದರು.
ಈ ಸೇತುವೆ ನಿರ್ಮಾಣದಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರಕ್ಕೆ ನೆರವಾಗಲಿದ್ದು, ಹಲವು ವರ್ಷಗಳಿಂದ ಇದ್ದ ಬೇಡಿಕೆ ಇದೀಗ ಈಡೇರಿದಂತಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಆರಂತೋಡು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಕೇಶವ ಆಡ್ತಲೆ, ಮರ್ಕಂಜ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷೆ ಗೀತಾ ಹೊಸೊಳಿಕೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪ ಮೇದಪ್ಪ, ಮರ್ಕಂಜ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಆರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹಾಗೂ ಎಲ್ಯಣ್ಣ ಅರಮನೆಗಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಕರ್ನಾಟಕದ ದಕ್ಷಿಣ ಒಳನಾಡಿಗೆ ‘ಯೆಲ್ಲೋ ಅಲರ್ಟ್’: ಮೇ 19 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ!
ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ಸುಬೋಧ್ ಶೆಟ್ಟಿ ಮೇನಾಲ, ಭಾರತಿ ಉಳುವಾರು, ದಯಾನಂದ ಕುರುಂಜಿ, ಕಿಶೋರ್ ಉಳುವಾರು, ಶೇಖರ ಚೋಡಿಪಣೆ, ಸೇತುವೆಯ ಫಲಾನುಭವಿಗಳು, ಗ್ರಾಮಸ್ಥರು ಸೇರಿದಂತೆ ಹಲವರು ಭಾಗವಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


