ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಬಂಧನ ಭೀತಿ: ಜಾತಿನಿಂದನೆ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ!

ಬೆಂಗಳೂರು: ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯವು ಬಂಧನದ ವಾರಂಟ್ (Arrest Warrant) ಜಾರಿಗೊಳಿಸಿದೆ. ಇದರಿಂದಾಗಿ ಶಾಸಕರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಕಠಿಣ ಕ್ರಮ ಕೈಗೊಂಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ. ಮೇ 7ರಂದು ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

Advertisement

ಇದನ್ನೂ ಓದಿ: ಪುದುಚೇರಿಯಲ್ಲಿ ಎನ್‌ಡಿಎ ಭರ್ಜರಿ ಜಯ; ಸಿಎಂ ರಂಗಸಾಮಿ ಆಡಳಿತಕ್ಕೆ ಮೋದಿ ಮೆಚ್ಚುಗೆ!

ಈ ಹಿಂದೆ ಹರಿಹರ ಟೌನ್ ಪೊಲೀಸ್ ಠಾಣೆಯಲ್ಲಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಜಾತಿನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *