ಬೆಂಗಳೂರು: ದೇಶಾದ್ಯಂತ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಈ ಫಲಿತಾಂಶ ಭಾರಿ ಸಂಚಲನ ಮೂಡಿಸಲಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶವೂ ಇಂದೇ ಹೊರಬೀಳುತ್ತಿದ್ದು, ರಾಷ್ಟ್ರ ರಾಜಕೀಯದ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ದಿನವಾಗಿದೆ.

ಇದನ್ನೂ ಓದಿ: 5 ರಾಜ್ಯಗಳಲ್ಲಿ 824 ಸ್ಥಾನಗಳಿಗೆ ಮತ ಎಣಿಕೆ : ಭಾರತದ ರಾಜಕೀಯ ನಕ್ಷೆ ಬದಲಾಗುತ್ತದೆಯೇ?
ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ವಿಜಯೋತ್ಸವದ ಮೇಲೆ ಹದ್ದಿನ ಕಣ್ಣಿಡಲಾಗಿದೆ.ಯಾವ ಪಕ್ಷಕ್ಕೆ ಜಯ ಸಿಗಲಿದೆ? ಬಾಗಲಕೋಟೆಯಲ್ಲಿ ಕಮಲ ಅರಳುತ್ತಾ ಅಥವಾ ಕೈ ಮೇಲಾಗುತ್ತಾ? ದಾವಣಗೆರೆ ದಕ್ಷಿಣದ ಮತದಾರ ಯಾರಿಗೆ ಒಲಿದಿದ್ದಾನೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

