ಪುತ್ತೂರು: ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಫೆ.7 ರಂದು ವಿದ್ಯಾರ್ಥಿಗಳ ವಿಜ್ಞಾನ ಆಸಕ್ತಿಯನ್ನು ಪ್ರೇರೇಪಿಸುವ ಸಲುವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅಟಲ್ ಟಿಂಕರಿಂಗ್ ಕಾರ್ಯಾಗಾರ ಹಾಗೂ ವಿಶೇಷ ವಿಜ್ಞಾನ ಪ್ರಯೋಗಾಲಯಗಳಲ್ಲಿ ಪುಟಾಣಿ ವಿಜ್ಞಾನಿಗಳಿಗಾಗಿ ಜ್ಞಾನ – ವಿಜ್ಞಾನ ಕಲರವ ‘ಸ್ಫೂರ್ತಿ’ ನಡೆಯಿತು.
ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ದೀಪ ಪ್ರಜ್ವಲಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ವಿಜ್ಞಾನ ಶಿಕ್ಷಕಿ ವಸಂತಿ ಕೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ಅವರು, ಶಾಲೆಯು ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಸ್ಮರಿಸಿ, ವಿದ್ಯಾರ್ಥಿಗಳು ಬಾಲ್ಯದಲ್ಲೇ ತಮ್ಮನ್ನು ತಾವು ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಕಲ್ಲಡ್ಕ ಶ್ರೀರಾಮ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ ಸಮಾರೋಪ

ಕಬಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಾಬು ಟಿ ಮಾತನಾಡಿ ಶುಭ ಹಾರೈಸಿದರು. ಎರಡೆರಡು ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಲೆಯನ್ನು ಪ್ರತಿನಿಧಿಸಿದ್ದ, ಶಾಲಾ ಹಿರಿಯ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಪೈ ತನ್ನ ಶಾಲಾ ದಿನಗಳನ್ನು ನೆನಪಿಸಿಕೊಂಡು ತನ್ನ ಸಾಧನೆಗೆ ಯಾವೆಲ್ಲ ಅಂಶಗಳು ಕಾರಣವಾಗಿತ್ತು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಶಾಲಾ ಹಿರಿಯ ವಿದ್ಯಾರ್ಥಿಗಳಾದ ನಿರ್ಮಿತ್ ಕೆ.ಪಿ., ಧನುಷ್ ಆಚಾರ್ಯ ಅವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್ ಅವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಸಂಧ್ಯಾ ಕೆ ಹಾಗೂ ಹರ್ಷಿಣಿಯವರು ನಿರೂಪಿದರು. ಶಿಕ್ಷಕಿ ಸಂಧ್ಯಾ ಕೆ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರಯೋಗಾಲಯದ ವೀಕ್ಷಣೆ, ವಿಜ್ಞಾನ ಮಾದರಿಗಳ ತಯಾರಿಯನ್ನು ತಿಳಿಸಿ ಹಾಗೂ ರಸಪ್ರಶ್ನೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

