ನವದೆಹಲಿ: ಇರಾನ್ನ ದಿವಂಗತ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಅಂತ್ಯಕ್ರಿಯೆಯ ಮಹತ್ವದ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಭಾರತದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರಿಗೆ ಇರಾನ್ ಸರ್ಕಾರದಿಂದ ಅಧಿಕೃತ ಆಹ್ವಾನ ಬಂದಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಇರಾನ್ನಲ್ಲಿ ಜರುಗಲಿರುವ ಈ ಐತಿಹಾಸಿಕ ಅಂತಿಮ ಸಂಸ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಭಾರತದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರಾದ ಬಿಜೆಪಿ ರಾಷ್ಟ್ರೀಯ ನಾಯಕರಾದ ನಿತಿನ್ ನವೀನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇರಾನ್ ಸರ್ಕಾರವು ಅಧಿಕೃತವಾಗಿ ಆಹ್ವಾನ ಪತ್ರವನ್ನು ರವಾನಿಸಿದೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ: ಪ್ರಸಿದ್ಧ ‘ಮಚೈಲ್ ಮಾತಾ ಯಾತ್ರೆ’ ತಾತ್ಕಾಲಿಕ ಸ್ಥಗಿತ
ಕಳೆದ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವೇಳೆ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರು ಹತರಾಗಿದ್ದರು. ಯುದ್ಧದ ಹಿನ್ನೆಲೆಯಲ್ಲಿ ಹಾಗೂ ಭದ್ರತಾ ಕಾರಣಗಳಿಂದಾಗಿ ವಿಳಂಬವಾಗಿದ್ದ ಅವರ ಅಂತಿಮ ಸಂಸ್ಕಾರದ ಪ್ರಕ್ರಿಯೆಗಳು ಹಾಗೂ ಸಾರ್ವಜನಿಕ ದರ್ಶನದ ವಿಧಿವಿಧಾನಗಳು ಮುಂದಿನ ವಾರ ಇರಾನ್ನಲ್ಲಿ ಅತ್ಯಂತ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಜರುಗಲಿವೆ. ಜಾಗತಿಕ ಮಟ್ಟದ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಭಾರತದ ರಾಜಕೀಯ ಧುರಂಧರರಿಗೂ ಆಹ್ವಾನ ನೀಡಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

