Breaking News

ಬಳ್ಳಾರಿ: ಹಾಸ್ಟೆಲ್‌ನಲ್ಲಿ ಸಹಪಾಠಿಗಳ ಮೇಲೆ 9ನೇ ತರಗತಿ ವಿದ್ಯಾರ್ಥಿ ಹಲ್ಲೆ! ಓರ್ವ ಸಾವು, 7 ಮಂದಿಗೆ ಗಾಯ

ballari-school-hostel-student-attack-one-dead-seven-injured

ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಳ್ಳಾರಿಯ ಗುರುಕುಲ್ ಇಂಟರ್‌ನ್ಯಾಷನಲ್ ಶಾಲೆಯ ಹಾಸ್ಟೆಲ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಈ ಘಟನೆ ತಡರಾತ್ರಿ ಸಂಭವಿಸಿದೆ. ಊಟದ ನಂತರ ವಿದ್ಯಾರ್ಥಿಗಳು ನಿದ್ದೆ ಮಾಡುತ್ತಿದ್ದ ವೇಳೆ ಸಣ್ಣ ವಿಷಯಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಆರೋಪಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿದ್ದವರಿಗೆ ಹಾಸಿಗೆಯ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿದ್ದಾನೆ.

Advertisement

ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ವಿಜಯನಗರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ವಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾತ್ರಿ ಗುಡಿಸಲಿಗೆ ನುಗ್ಗಿ 90 ವರ್ಷದ ಅಜ್ಜಿ ಮೇಲೆ ಸಾಮೂಹಿಕ ಅತ್ಯಾಚಾರ

ಇತ್ತ ಘಟನೆ ಬಳಿಕ ಆರೋಪಿ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ. ಇದೇ ವೇಳೆ ಮೃತ ವಿದ್ಯಾರ್ಥಿಯ ಕುಟುಂಬಸ್ಥರು, ಈ ಘಟನೆ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶಾಲೆಯವರು ಕಬ್ಬಿಣದ ರಾಡ್ ದಾಳಿ ಎಂದು ಹೇಳುತ್ತಿದ್ದಾರೆ. ಆದರೆ ಚಾಕುವಿನಿಂದ ಇರಿಯಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ಇಂತಹ ಘಟನೆ ಹೇಗೆ ನಡೆಯಿತು ಎಂದು ಪ್ರಶ್ನಿಸಿ ಶಾಲಾ ಆಡಳಿತದ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು