Breaking News

Bangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.

ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ನಿರ್ದೇಶನಾಲಯ ;

Advertisement

ಈಗಾಗಲೇ, ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್, ಮೊಬೈಲ್ ಆ್ಯಪ್ ಹಾಗೂ ಬಸ್ ನಿಲ್ದಾಣಗಳ ಕೌಂಟರ್‌ಗಳಲ್ಲಿ ಲಭ್ಯವಿದ್ದ ಮುಂಗಡ ಬುಕ್ಕಿಂಗ್ ವ್ಯವಸ್ಥೆ, ಇದೀಗ ನಗರದ 161 ಬೆಂಗಳೂರು-ಒನ್ ಕೇಂದ್ರಗಳು ಮತ್ತು ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಇರುವ 1,021 ಕರ್ನಾಟಕ-ಒನ್ ಕೇಂದ್ರಗಳಲ್ಲಿಯೂ ಲಭ್ಯವಿದೆ.
ಈ ಯೋಜನೆಯನ್ನು ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ನಿರ್ದೇಶನಾಲಯ (EDCS) ಸಹಯೋಗದಲ್ಲಿ ಜಾರಿಗೆ ತರಲಾಗಿದೆ. ಇದರ ಮೂಲಕ ಪ್ರಯಾಣಿಕರಿಗೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಇನ್ನಷ್ಟು ಸುಲಭ ಹಾಗೂ ಸುಗಮವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Belthangady : ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ರಾಜ್ಯದ ಇತರ ಭಾಗಗಳಲ್ಲಿಯೂ ಸೌಲಭ್ಯ ;

ಬೆಂಗಳೂರು ನಗರದಲ್ಲೇ 161 ಕೇಂದ್ರಗಳಲ್ಲಿ ಸೇವೆ ಲಭ್ಯವಿರುವುದರಿಂದ, ನಿವಾಸಿಗಳು ತಮ್ಮ ಮನೆ ಸಮೀಪದ ಕೇಂದ್ರಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಇನ್ನು ರಾಜ್ಯದ ಇತರ ಭಾಗಗಳಲ್ಲಿಯೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಈ ಸೌಲಭ್ಯ ದೊರೆಯಲಿದೆ.

ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಾಲ್ ಸೆಂಟರ್ :

ಈ ವ್ಯವಸ್ಥೆಯಿಂದ ದಿನನಿತ್ಯದ ಪ್ರಯಾಣಿಕರು ಹಾಗೂ ದೂರದ ಪ್ರಯಾಣ ಮಾಡುವವರಿಗೆ ಪ್ರಯಾಣ ಯೋಜನೆ ರೂಪಿಸಿಕೊಳ್ಳುವುದು ಇನ್ನಷ್ಟು ಸುಲಭವಾಗಲಿದೆ ಎಂಬ ನಿರೀಕ್ಷೆಯನ್ನು ನಿಗಮ ವ್ಯಕ್ತಪಡಿಸಿದೆ. ಪ್ರಯಾಣಿಕರು ಸಹಾಯಕ್ಕಾಗಿ 24×7 ಕಾರ್ಯನಿರ್ವಹಿಸುವ ಕೆಎಸ್‌ಆರ್‌ಟಿಸಿ ಕಾಲ್ ಸೆಂಟರ್ ಸಂಖ್ಯೆ 080-26252625 ಅಥವಾ ಬೆಳಿಗ್ಗೆ 7 ರಿಂದ ರಾತ್ರಿ 10ರವರೆಗೆ ಲಭ್ಯವಿರುವ AWATAR ಸೆಲ್ (7760990034 / 7760990035) ಅನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು