Breaking News

T-20 Worldcup: ಟೂರ್ನಿಯಿಂದ ಹೊರಬೀಳಲಿದೆಯೇ ಬಾಂಗ್ಲಾದೇಶ!

ಢಾಕಾ: ಭಾರತ ಮತ್ತು ಶ್ರೀಲಂಕಾದಲ್ಲಿ ಆಯೋಜಿತವಾಗಿರುವ T-20 ವಿಶ್ವಕಪ್ ನಿಂದ ಭದ್ರತಾ ಕಾರಣ ನೀಡಿ ಬಾಂಗ್ಲಾದೇಶ ತಂಡ ಹೊರಗುಳಿಯುವ ಸಧ್ಯತೆ ಹೆಚ್ಚಾಗಿದೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ 2026 ಟಿ-20 ವಿಶ್ವಕಪ್ ಗ್ರೂಪ್ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು. ಆದರೆ, ಈ ಮನವಿಯನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿರಸ್ಕರಿಸಿದ ಒಂದು ದಿನದ ಬಳಿಕ ಭದ್ರತಾ ಕಾಳಜಿಯನ್ನ ಉಲ್ಲೇಖಿಸಿ ಬಾಂಗ್ಲಾದೇಶ ಟೂರ್ನಿಯಿಂದ ಹಿಂದೆ ಸರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಐಪಿಎಲ್ ತಂಡ ಕೆಕೆಆರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಸಿಸಿಐ ಸೂಚನೆ ಮೇರೆಗೆ ಕೈಬಿಟ್ಟಿತು. ಬಳಿಕ ಇದರ ಬೆನ್ನಲ್ಲೇ ಬಾಂಗ್ಲಾದಲ್ಲಿ ಅನಿರ್ದಿಷ್ಟಾವಧಿವರೆಗೆ ಯಾವುದೇ ಐಪಿಎಲ್ ಪಂದ್ಯಗಳನ್ನು ನೇರಪ್ರಸಾರ ಮಾಡದಂತೆ ಅಲ್ಲಿನ ಸರ್ಕಾರ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ‘ಹೀಟರ್’ ಇಡೀ ರಾತ್ರಿ ಆನ್ ಇಡುವುದರಿಂದ ಉಂಟಾಗುವ 5 ಆರೋಗ್ಯ ಅಪಾಯಗಳು

ಅಲ್ಲದೆ, ಮುಂಬರುವ ಫೆಬ್ರವರಿಯಲ್ಲಿ ಟಿ-20 ವಿಶ್ವಕಪ್‌ಗೆ ಭಾತರಕ್ಕೆ ಬರುವುದಿಲ್ಲ ಎಂದು ಬಾಂಗ್ಲಾದೇಶ ಇತ್ತೀಚೆಗಷ್ಟೇ ಹೇಳಿತ್ತು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಐಸಿಸಿಗೆ ಪತ್ರ ಬರೆದಿತ್ತು. “ಭಾರತಕ್ಕೆ ನಮ್ಮ ತಂಡವನ್ನು ಕಳುಹಿಸುದಿಲ್ಲ. ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರ ಮಾಡಿ,” ಎಂದು ಬೇಡಿಕೊಂಡಿತ್ತು. ಆದರೆ ಇದೀಗ ಇದನ್ನು ಬಿಸಿಸಿಐ ತಿರಸ್ಕರಿಸಿದ ಕಾರಣ ಬಾಂಗ್ಲಾದೇಶ ಟಿ-20 ವಿಶ್ವಕಪ್ ಟೂರ್ನಿಯಿಂದ ಹಿಂದೆ ಸರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಂಗ್ಲಾದೇಶವು ಭಾರತ ಬಿಟ್ಟು ಬೇರೆಡೆ ಪಂದ್ಯಗಳನ್ನು ಆಡಿಸುವಂತೆ ಮನವಿ ಮಾಡಿತ್ತು. ಆದರೆ ಅವರ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಆದ್ದರಿಂದ ಬಾಂಗ್ಲಾದೇಶ ಸ್ವಯಂಪ್ರೇರಿತರಾಗಿ ಟೂರ್ನಿಯಿಂದ ಹಿಂದೆ ಸರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ಬಾಂಗ್ಲಾದೇಶಕ್ಕೆ ಭಾರೀ ಹಿನ್ನಡೆ ಆಗಿದೆ.

ಸ್ಕಾಟ್ಲೆಂಡ್‌ಗೆ ಲಾಭ?

ಬಾಂಗ್ಲಾದೇಶ ಏನಾದರೂ ಟೂರ್ನಿಯಿಂದ ಹೊರಗುಳಿದರೆ ಆ ಸ್ಥಾನಕ್ಕೆ ಸ್ಕಾಟ್ಲೆಂಡ್ ತಂಡ ಬರಲಿದೆ. ಟೂರ್ನಮೆಂಟ್ ಮೊದಲಿನಂತಯೇ ನಡೆಯಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು