ಕಣ್ಣೆದುರೇ ನದಿಗೆ ಉರುಳಿತು ಬಸ್! ಬಾಂಗ್ಲಾದೇಶದ ಪದ್ಮಾ ನದಿಯಲ್ಲಿ 23 ಮಂದಿ ಜಲಸಮಾಧಿ

ಢಾಕಾ: ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯ ದೌಲಾಡಿಯಾ ಟರ್ಮಿನಲ್‌ನಲ್ಲಿ ಬುಧವಾರ ಸಂಜೆ ಮನಕಲಕುವ ಘಟನೆಯೊಂದು ನಡೆದಿದೆ. ಒಂದು ದಡದಿಂದ ಮತ್ತೊಂದು ದಡಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಾರಿಗೆ ದೋಣಿಯಲ್ಲಿದ್ದ (Ferry) ಖಾಸಗಿ ಬಸ್ ನಿಯಂತ್ರಣ ತಪ್ಪಿ ನೇರವಾಗಿ ಪದ್ಮಾ ನದಿಗೆ ಉರುಳಿದೆ.

ಸುಮಾರು 50 ಪ್ರಯಾಣಿಕರಿದ್ದ ಬಸ್ ಢಾಕಾದಿಂದ ರಾಜ್‌ಬರಿ ಕಡೆಗೆ ಸಂಚರಿಸುತ್ತಿತ್ತು. ದೋಣಿಯ ಮೇಲೆ ಬಸ್ ಹತ್ತುವಾಗ ಅಥವಾ ದೋಣಿಯಲ್ಲಿದ್ದಾಗ ಆಯತಪ್ಪಿ ನದಿಗೆ ಬಿದ್ದಿದೆ. ಬಸ್ ನೀರಿನಲ್ಲಿ ಮುಳುಗುತ್ತಿದ್ದಂತೆ ದೋಣಿಯಲ್ಲಿದ್ದ ಇತರ ಪ್ರಯಾಣಿಕರು ಮತ್ತು ಕುಟುಂಬಸ್ಥರು ಕಿರುಚಾಡುತ್ತಾ ನೆರವಿಗೆ ಧಾವಿಸುವ ದೃಶ್ಯಗಳು ಎದೆಝಲ್ಲೆನಿಸುವಂತಿವೆ.

Advertisement

ಇದನ್ನೂ ಓದಿ: ಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ: 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ; ಎಲ್ಲರೂ ಸಾವನ್ನಪ್ಪಿರುವ ಭೀತಿ!

ಇಲ್ಲಿದೆ ನೋಡಿ ವಿಡಿಯೋ;

ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಕನಿಷ್ಠ 23 ಜನರು ಮೃತಪಟ್ಟಿದ್ದಾರೆ. ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವವರಿಗಾಗಿ ಅಗ್ನಿಶಾಮಕ ದಳ ಮತ್ತು ನುರಿತ ಡೈವರ್‌ಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಘಟನೆಯ ಭೀಕರತೆಯನ್ನು ಸಾರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತಮ್ಮವರನ್ನು ಕಳೆದುಕೊಂಡ ಮಕ್ಕಳ ಮತ್ತು ಸಂಬಂಧಿಕರ ಆಕ್ರಂದನ ನೋಡುಗರ ಕಣ್ಣಾಲಿಗಳನ್ನು ತೇವಗೊಳಿಸುತ್ತಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು