Breaking News

ಎಟಿಎಂಗೆ ಹಣ ತುಂಬಿ ಬೀಗದ ಕೈ ಮರೆತು ತೆರಳಿದ ಸಿಬ್ಬಂದಿ: ಬ್ಯಾಂಕ್ ಆಫ್ ಬರೋಡಾ ಮತ್ತು ಪೊಲೀಸರ ಗಮನಕ್ಕೆ ತಂದ ಸಾರ್ವಜನಿಕರು

ಬೆಂಗಳೂರು : ನಗರದ ಹೊರಮಾವು ಆಗರ ಮುಖ್ಯ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ (Bank of Baroda) ಎಟಿಎಂ ಕೇಂದ್ರದಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದಿಂದ ದೊಡ್ಡ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ಎಟಿಎಂ ಯಂತ್ರಕ್ಕೆ ಹಣ ತುಂಬಿದ (Cash Replenishment) ನಂತರ ಸಿಬ್ಬಂದಿ ಮುಖ್ಯ ಭದ್ರತಾ ಕೀಲಿಯನ್ನು (Key) ಯಂತ್ರದಲ್ಲಿಯೇ ಮರೆತು ಹೊರಟುಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಕಳ್ಳತನ ಮತ್ತು ಎಟಿಎಂ ದರೋಡೆ ಘಟನೆಗಳು ಹೆಚ್ಚುತ್ತಿರುವ ಈ ಸಮಯದಲ್ಲಿ, ಈ ರೀತಿಯ ಬೇಜವಾಬ್ದಾರಿ ನಡೆ ಅಪರಾಧಿಗಳಿಗೆ ಸುಲಭವಾಗಿ ಕಳವು ಮಾಡಲು ಅನುವು ಮಾಡಿಕೊಟ್ಟಂತಾಗಿದೆ ಎಂದು ಸ್ಥಳೀಯ ಸಾರ್ವಜನಿಕರು ಹಾಗೂ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೊರಮಾವು ಆಗರ ಮುಖ್ಯ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಡ್ಯಾನ್ಸ್ ಚಿತ್ರೀಕರಣದಲ್ಲಿ ರಶ್ಮಿಕಾ ಮಂದಣ್ಣಗೆ ಅಪರೂಪದ ಹಿಪ್ ಇಂಜುರಿ! ರಣಬಾಳಿ ಅಥವಾ ಮೈಸಾ ಶೂಟಿಂಗ್‌ ವಿಳಂಬ

ಇಲ್ಲಿದೆ ನೋಡಿ ವಿಡಿಯೋ:

ಹಣ ಜಮಾ ಮಾಡಿದ ಏಜೆನ್ಸಿ ಅಥವಾ ಬ್ಯಾಂಕ್ ಸಿಬ್ಬಂದಿ ಎಟಿಎಂನ ಕೀಲಿ ಕೈಯನ್ನು ಯಂತ್ರದಲ್ಲೇ ಬಿಟ್ಟು ತೆರಳಿದ್ದಾರೆ. ಈ ಗಂಭೀರ ಲೋಪದ ಬಗ್ಗೆ ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಆಫ್ ಬರೋಡಾ ಹಾಗೂ ಬೆಂಗಳೂರು ನಗರ ಪೊಲೀಸರಿಗೆ ಎಕ್ಸ್ (ಟ್ವಿಟರ್) ಮೂಲಕ ಸಾರ್ವಜನಿಕರು ದೂರು ನೀಡಿದ್ದಾರೆ. ಸಾರ್ವಜನಿಕರ ಹಣದ ರಕ್ಷಣೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಜರುಗಿಸಬೇಕಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *