ಬಂಟಲಾಬ್ ದುರಂತ: 12 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಬಳಿಕ ಮೂವರ ಶವ ಪತ್ತೆ

ಜಮ್ಮು ಕಾಶ್ಮೀರ  : ಬಂಟಲಾಬ್  ಪ್ರದೇಶದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಸೇತುವೆಯ ಒಂದು ಭಾಗ ಕುಸಿದುಬಿದ್ದಿದೆ. ಈ ವೇಳೆ ನಾಲ್ವರು ಅವಶೇಷಗಳಡಿ ಸಿಲುಕಿದ್ದರು. .ಮೂವರ ಮೃತದೇಹಗಳನ್ನು ಹೊರತೆಗೆದಿದ್ದು, ಅವಶೇಷಗಳಡಿ ಸಿಲುಕಿಕೊಂಡಿದ್ದ ಒಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು, ಸೇತುವೆಯ ರಿಪೇರಿ ಹಾಗೂ ನೆಲೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಭಾಗ ಕುಸಿದು ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದರು. ತಕ್ಷಣವೇ ಪೊಲೀಸರು, ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸೇರಿ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು.

Advertisement

ಇದನ್ನೂ ಓದಿ ವಿನಯ್ ಕುಲಕರ್ಣಿ ಶಾಸಕತ್ವ ಅನರ್ಹ: ಅಧಿಕೃತ ಆದೇಶ ಹೊರಡಿಸಿದ ವಿಧಾನಸಭೆ; ಧಾರವಾಡ ಗ್ರಾಮೀಣ ಕ್ಷೇತ್ರ ಈಗ ತೆರವು!

ಸುಮಾರು 12 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಮೂವರ ಮೃತದೇಹಗಳನ್ನು ಹೊರತೆಗೆದು, ಒಬ್ಬರನ್ನು ಜೀವಂತವಾಗಿ ರಕ್ಷಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಈ ಘಟನೆಗೆ ಸಂಬಂಧಿಸಿ ಜಮ್ಮು–ಕಾಶ್ಮೀರ ಉಪ ಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಕುರಿತು ಐದು ದಿನಗಳಲ್ಲಿ ವರದಿ ಸಲ್ಲಿಸಲು ತನಿಖಾ ಸಮಿತಿಗೆ ಸೂಚನೆ ನೀಡಲಾಗಿದೆ.  ದುರ್ಘಟನೆ ನಿರ್ಮಾಣ ಕಾಮಗಾರಿಗಳ ಸುರಕ್ಷತೆ ಹಾಗೂ ಮೇಲ್ವಿಚಾರಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು