ಬಂಟ್ವಾಳ (ಬಿ.ಸಿ. ರೋಡ್): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್‌ನಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಭಾರಿ ಪ್ರಮಾಣದಲ್ಲಿ ನೀರು ವ್ಯರ್ಥವಾಗುತ್ತಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ನಿವಾಸಿಗಳು ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರೂ, ದುರಸ್ತಿ ಕಾರ್ಯ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಬಿ.ಸಿ. ರೋಡ್‌ನ ಪೊಳಲಿ ಕೈಕಂಬ ದ್ವಾರದಿಂದ ಮೊಡಂಕಾಪು ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಈ ಅವಾಂತರ ಸಂಭವಿಸಿದೆ.ಒಡೆದ ಪೈಪ್‌ನಿಂದ ನೀರು ರಸ್ತೆಯ ಮೇಲೆ ಕಾರಂಜಿಯಂತೆ ಚಿಮ್ಮುತ್ತಿದ್ದು, ನೂರಾರು ಲೀಟರ್ ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.ರಸ್ತೆಯ ಮೇಲೆಯೇ ನೀರು ಹರಿಯುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ದೊಡ್ಡ ಕೆರೆಯಲ್ಲಿ ಮೀನುಗಳ ಸಾವು! ತನಿಖೆಗೆ ಆಗ್ರಹ
ಬೆಳಿಗ್ಗೆಯೇ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಮಧ್ಯಾಹ್ನದವರೆಗೂ ಯಾವುದೇ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.ಬೇಸಿಗೆಯ ದಿನಗಳಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ಪುರಸಭೆ ಅಥವಾ ಜಲಮಂಡಳಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಮತ್ತು ನೀರಿನ ಪೋಲು ತಡೆಯಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

