ಬಂಟ್ವಾಳ: ಡಿವೈಡರ್ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

bantwal-car-accident-7-students-injured-maripalla

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಬುಧವಾರ ರಾತ್ರಿ ನಡೆದಿದೆ.

ರಾತ್ರಿ ಸುಮಾರು 12:45ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಕಾರಿನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಇದನ್ನೂ ಓದಿ: ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ವೇಗದೂತ ಕಾರು; ಭೀಕರ ಅಪಘಾತದ ದೃಶ್ಯ

ಮಂಗಳೂರುದಿಂದ ಬಿ.ಸಿ.ರೋಡ್ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಮಾರಿಪಳ್ಳದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿತು. ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ.

ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬ ಮುರಿದುಹೋಗಿದ್ದು, ಕಾರು ಸಂಪೂರ್ಣ ಹಾನಿಗೊಂಡಿದೆ. ಸ್ಥಳೀಯರ ಸಹಾಯದಿಂದ ಉರುಳಿದ ಕಾರನ್ನು ಮೇಲಕ್ಕೆತ್ತಿ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು