ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ (B.C. Road) ಪೊನ್ನೋಡಿ, ಕರಾವಳಿ ಸರ್ವೀಸ್ ಸ್ಟೇಷನ್ ಬಳಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹೋರಿಯೊಂದನ್ನು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಹೋರಿ ಬಾವಿಗೆ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ, ಹಗ್ಗ ಹಾಗೂ ಸುರಕ್ಷತಾ ಸಾಧನಗಳನ್ನು ಬಳಸಿ ಕಾರ್ಯಾಚರಣೆ ಆರಂಭಿಸಿದರು.
ಸಿಬ್ಬಂದಿಯ ಸಮಯಪ್ರಜ್ಞೆ, ಧೈರ್ಯ ಹಾಗೂ ತಂಡದ ಸಮನ್ವಯದಿಂದ ಬಾವಿಯೊಳಗೆ ಬಿದ್ದಿದ್ದ ಹೋರಿಯನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಮೂಕಪ್ರಾಣಿಯ ಜೀವ ಉಳಿಸಿದ ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹರೀಶ್ ಕೆ.ಟಿ., ಪ್ರಮುಖ ಅಗ್ನಿಶಾಮಕ ರೋಹಿತ್, ಅಗ್ನಿಶಾಮಕ ಚಾಲಕ ಕಿರಣ್ ಕುಮಾರ್, ಫೈರ್ ಫೈಟರ್‌ಗಳಾದ ಸತಿ ಸಂಗಡಿ, ವಿಜಯಕುಮಾರ್ ಷ. ಬೂದಗಟ್ಟಿ ಹಾಗೂ ಧರ್ಮ ಎಂ. ಭಾಗವಹಿಸಿದ್ದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ


