ಬಂಟ್ವಾಳ: ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಮಂಚಿ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಶಂಕರ್ ರಾವ್ ಮಂಚಿ ಹೇಳಿದರು.
ಇಂದು ಶಾಲಾ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದು ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು ಎಂದರು.

ಇದನ್ನೂ ಓದಿ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವ
ಸಂಭ್ರಮದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲ ವಿಟ್ಲ ಶುಭಹಾರೈಸಿದರು.
ದೈಹಿಕ ಶಿಕ್ಷಣ ಶಿಕ್ಷಕಿ ವಿನೋದ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕ ಶಿವಕುಮಾರ್ ಎಂ. ಜಿ. ವಂದಿಸಿದರು. ಗಣಿತ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com)

