ಮಂಚಿ: ಕೊಳ್ನಾಡು ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ

Manchi High school g1 news photo

ಬಂಟ್ವಾಳ: ತಾಲೂಕಿನ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ ಡಿ.29 ರಂದು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಣ ಅಧಿಕಾರಿ ಹಾಗೂ ಶಿಕ್ಷಣ ಚಿಂತಕ ಡಾ. ಕುಮಾರಸ್ವಾಮಿ ಎಚ್., ಪ್ರಾಮಾಣಿಕತೆ, ಮಾನವೀಯ ಮೌಲ್ಯಗಳು ವಿದ್ಯಾರ್ಥಿಗಳ ಸೊತ್ತಾಗಬೇಕು ಎಂದರು.

ಆಧುನಿಕ ತಂತ್ರಜ್ಞಾನಗಳ ಪರಿಣಾಮಕಾರಿ ಪ್ರಭಾವದಿಂದ ಸನ್ನಡತೆಗೆ ವಿಮುಖರಾಗದೆ ಬದುಕಿನ ಮೌಲ್ಯಗಳಿಗೆ ಬೆಲೆ ನೀಡಬೇಕಾಗಿದೆ. ಅಂಕಗಳ ಜೊತೆಗೆ ಕೌಶಲಗಳ ಬೆಳವಣಿಗೆಗೆ ಹೆಚ್ಚು ಒತ್ತು ನೀಡುವ ಮೂಲಕ ಬದುಕಿನ ಭದ್ರತೆಗೆ ಬುನಾದಿ ಹಾಕಬೇಕಾಗಿದೆ ಎಂದರು.

Advertisement

ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ತಾಳಿತ್ತನೂಜಿ ಮಾತನಾಡಿ, ನಾವೆಲ್ಲ ಬಾಲ್ಯದ ಸಂಭ್ರಮಕ್ಕೊಂದು ಸುಂದರ ವೇದಿಕೆ ಕಲ್ಪಿಸಿಕೊಡುವುದು ಅತ್ಯವಶ್ಯ. ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಅವಕಾಶಗಳು ಸೃಷ್ಟಿಯಾದಷ್ಟು ಪ್ರತಿಭೆಗಳು ಹೊರ ಜಗತ್ತಿಗೆ ತೆರೆದಿಡುತ್ತದೆ. ಶಾಲಾ ಜೀವನದ ಸುಂದರ ಕ್ಷಣಗಳು ಮತ್ತೆ ಮತ್ತೆ ಮರುಕಳಿಸಲು ಇಂತಹ ವಾರ್ಷಿಕೋತ್ಸವ ಕಾರಣಗಳಾಗುತ್ತವೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಶಂಕರ್ ರಾವ್ ಮಂಚಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಾಲೆ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಬೆಳೆಯಲು ಪೂರಕ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ. ಶಾಲಾ ಶಿಕ್ಷಣದ ಜೊತೆ ಸಂಸ್ಕಾರದ ಮೌಲ್ಯಗಳನ್ನು ಬೋಧಿಸಲಾಗುತ್ತಿದ್ದು ಸುಂದರ ಸಮಾಜವನ್ನು ಸೃಷ್ಟಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

Advertisement

ಕಾರ್ಯಕ್ರಮದಲ್ಲಿ ಶಾಲಾ ಹಿರಿಯ ವಿದ್ಯಾರ್ಥಿನಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಪಿ. ಮಮತಾ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಮಮತಾ ಶೆಟ್ಟಿ, ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು.

ಕೊಳ್ಳಾಡು ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಮಂಚಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರೈ ತಿರುವಾಜೆ, ಪ್ರಗತಿಪರ ಕೃಷಿಕ ನಿಶ್ಚಲ್ ಜಿ ಶೆಟ್ಟಿ, ಯಕ್ಷಗಾನ ಗುರು ಅಶ್ವತ್ಥ್ ಮಂಜನಾಡಿ ವಾರ್ಷಿಕೋತ್ಸವದ ಕುರಿತಾಗಿ  ಮಾತುಗಳನ್ನಾಡಿದರು.

ವಿಜೇತರಿಗೆ ಬಹುಮಾನ ವಿತರಣೆ

ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷಗಾನ, ನಾಟಕ ಪ್ರದರ್ಶನಗಳು ನಡೆದವು

ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯ ಸವಿತಾ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಾವತಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಲಾ ಶಿಕ್ಷಕ ಜಗನ್ನಾಥ ಪಿ ಸ್ವಾಗತಿಸಿ, ಗಣಿತ ಶಿಕ್ಷಕಿ ಸುನಂದ ಎಚ್.ಬಿ. ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುಶೀಲ ವಿಟ್ಲ ವರದಿ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜ್ಞಾನ ಶಿಕ್ಷಕ ವಾಝಿ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು