ಬಂಟ್ವಾಳ: ತಾಲೂಕಿನ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಜ.23 ರಂದು ಸರಸ್ವತಿ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಚಿತ್ರಾಪುರ ಮಠದ ವಿದ್ಯೆಂದ್ರ ತೀರ್ಥ ಶ್ರೀಪಾದರವರು ವಿದ್ಯಾರ್ಥಿಗಳಿಗೆ ಧರ್ಮದ ನಿಜವಾದ ವಿಚಾರಗಳನ್ನು ತಿಳಿದು ಅನುಷ್ಠಾನಗೊಳಿಸಬೇಕು ಎಂದು ಕಿವಿಮಾತು ಹೇಳಿ ಆಶೀರ್ವಚನ ಮಾಡಿದರು.


ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ ಆಗಿರುವ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ಸಮಾರೋಪ

ಕಶೆಕೋಡಿ ಶ್ರೀ ಸೂರ್ಯನಾರಾಯಣ ಭಟ್ ನೇತೃತ್ವದಲ್ಲಿ ಪೂಜೆಯು ನಡೆಯಿತು. ಎಲ್ಲಾ ವಿಭಾಗದ ಮುಖ್ಯಸ್ಥರು ಶಿಕ್ಷಕರು ಶಿಕ್ಷಕೇತರರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಕ್ಷತಾ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿ, ಜಯಸೂರ್ಯ ವಂದಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

