ಬಂಟ್ವಾಳ: ಅವೈಜ್ಞಾನಿಕವಾಗಿ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ವತಿಯಿಂದ ಮಂಗಳವಾರ ಸಂಜೆ ಬೃಹತ್ ಪ್ರತಿಭಟನಾ ಪಾದಯಾತ್ರೆ ‘ಜನಾಂದೋಲನ ನಡಿಗೆ’ ನಡೆಯಿತು.
ಮಾಜಿ ಸಚಿವ ಬಿ. ರಮಾನಾಥ್ ರೈ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯು ಬಿ.ಸಿ ರೋಡ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಆರಂಭವಾಗಿ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದವರೆಗೆ ಸಾಗಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ್ ರೈ, “ಬ್ರಹ್ಮರಕೂಟ್ಲು ಟೋಲ್ ಗೇಟ್ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ ಮತ್ತು ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಇದನ್ನು ಸ್ಥಾಪಿಸಲಾಗಿದೆ. ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ಇದೊಂದು ಜನಪದ ಮತ್ತು ಜಾತ್ಯತೀತ ಚಳುವಳಿಯಾಗಿದೆ. ಈ ಟೋಲ್ ಗೇಟ್ ತೆರವುಗೊಳ್ಳುವವರೆಗೆ ನಮ್ಮ ಹೋರಾಟ ನಿಲ್ಲದು” ಎಂದು ಗುಡುಗಿದರು.
ಇದನ್ನೂ ಓದಿ: Bantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ

ಜಿಲ್ಲೆಯಾದ್ಯಂತ ಹೊಸ ಟೋಲ್ ಗೇಟ್‌ಗಳು ತಲೆಎತ್ತುತ್ತಿರುವುದು ಜನಸಾಮಾನ್ಯರ ಮೇಲೆ ಹೊರೆಯಾಗುತ್ತಿದೆ. ಈ ವಿರೋಧಿ ನೀತಿಯ ವಿರುದ್ಧ ಕೇಂದ್ರ ಸರ್ಕಾರ ಮತ್ತು ಸ್ಥಳೀಯ ಪ್ರತಿನಿಧಿಗಳನ್ನು ಎಚ್ಚರಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

