ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ವೇಗದೂತ ಕಾರು; ಭೀಕರ ಅಪಘಾತದ ದೃಶ್ಯ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘೋರ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ರಸ್ತೆಯ ಮೇಲೆ ಬಿದ್ದಿದ್ದು, ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈರಲ್ ಆಗಿರುವ ಸಿಸಿಟಿವಿ ದೃಶ್ಯದ ಪ್ರಕಾರ, ಮಹಿಳೆ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಹಾರಿ ರಸ್ತೆಯ  ಬದಿಯಲ್ಲಿದ್ದ ಗುಳಿಗನ ಕಟ್ಟೆಗೆ ಹೋಗಿ ಬಿದ್ದಿದ್ದಾರೆ. ಸ್ಥಳೀಯರು ಕೂಡಲೇ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸುವಲ್ಲಿ ನೆರವಾಗಿದ್ದಾರೆ. ಅಮ್ಮ ಮತ್ತು ಮಗಳು ಗುಳಿಗನಿಗೆ ಕಾಣಿಕೆ ಹಾಕಲು ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪು ಕದಿಯುವ ‘ವಿಕೃತ’ನ ಕಾಟ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಿಡಿಗೇಡಿಯ ಕೃತ್ಯ!

ಇಲ್ಲಿದೆ ನೋಡಿ ವಿಡಿಯೋ: 

ಗಾಯಗೊಂಡ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು