ಬಂಟ್ವಾಳದ ಸಜಿಪನಡು ಮಸೀದಿ ಬಳಿ ರಣರಂಗ: ತಲವಾರ್, ರಾಡ್‌ಗಳಿಂದ ಭೀಕರ ಗುಂಪು ಘರ್ಷಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಮಸೀದಿಯೊಂದರ ಬಳಿ ಎರಡು ಗುಂಪುಗಳ ನಡುವೆ ಭೀಕರ ಸಂಘರ್ಷ ಏರ್ಪಟ್ಟಿದೆ. ಮಸೀದಿ ಆಡಳಿತ ಮಂಡಳಿಯ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಈ ಗಲಾಟೆಯಲ್ಲಿ ತಲವಾರ್ ಮತ್ತು ಕಬ್ಬಿಣದ ರಾಡ್‌ಗಳನ್ನು ಬಳಸಿ ಪರಸ್ಪರ ದಾಳಿ ನಡೆಸಲಾಗಿದ್ದು, ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದವು ವಿಕೋಪಕ್ಕೆ ತಿರುಗಿ, ಎರಡೂ ಗುಂಪುಗಳು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿವೆ. ಈ ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಸೀದಿ ಸಮಿತಿಯ ಆಂತರಿಕ ಭಿನ್ನಾಭಿಪ್ರಾಯ ಮತ್ತು ಅಧಿಕಾರದ ವಿಚಾರವೇ ಈ ಘರ್ಷಣೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Advertisement

ಇದನ್ನೂ ಓದಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 3 ಪ್ರತ್ಯೇಕ ಎಫ್‌ಐಆರ್ (FIR) ದಾಖಲಿಸಲಾಗಿದೆ. ಗ್ರಾಮದಲ್ಲಿ ಮತ್ತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು