Breaking News

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

ಉಡುಪಿ: ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭ ಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

ಉಡುಪಿಯಲ್ಲಿ ಮಾತನಾಡಿದ ಯತ್ನಾಳ್, ಈ ಬಾರಿ ಅಧಿವೇಶನದಲ್ಲಿ ಜನರ ತೆರಿಗೆ ಹಣ ಹಾಳು ಮಾಡುವ ಕೆಲಸವಾಯಿತು. ಕೇಂದ್ರ ಸರ್ಕಾರ ಮತ್ತು ಮೋದಿ ಅವರನ್ನು ಟೀಕೆ ಮಾಡಲು ಕರೆದ ಅಧಿವೇಶನ. ಜಿ ರಾಮ್ ಜಿ ಬಗ್ಗೆ ಸರಿಯಾದ ಚರ್ಚೆ ಆಗಲಿಲ್ಲ.

Advertisement

ಇದನ್ನೂ ಓದಿ: ಭಾಗ್ಯಶ್ರೀ ಆರ್. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಅಬಕಾರಿ ಇಲಾಖೆ ಭ್ರಷ್ಟಾಚಾರ ತಾರ್ಕಿಕ ಅಂತ್ಯವಾಗಿಲ್ಲ. ಇದೊಂದು ಅರ್ಥಹೀನ ಅಧಿವೇಶನ. ಕೇಂದ್ರ ಸರ್ಕಾರದ ಪ್ರತಿನಿಧಿಯಾದ ರಾಜ್ಯಪಾಲರಿಂದ ಕೇಂದ್ರವನ್ನೇ ಟೀಕೆ ಮಾಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸರ್ಕಾರದ ವೈಫಲ್ಯ ಹೇಳಲ್ಲ. ವಿಧಾನಸಭೆಯಲ್ಲೂ ಮಾತನಾಡಲ್ಲ, ಬಹಿರಂಗವಾಗಿಯೂ ಮಾತನಾಡಲ್ಲ. ಸದನದಲ್ಲಿ ಕುಳಿತುಕೊಳ್ಳುವುದಿಲ್ಲ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ.

ಜಿ ರಾಮ್ ಜಿ ಬಗ್ಗೆ ರಾಜ್ಯ ಸರ್ಕಾರ ಮೂಡಿಸಿದ ತಪ್ಪು ಅಭಿಪ್ರಾಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹೋಗಲಾಡಿಸುವಲ್ಲಿ ವಿಫಲವಾಗಿದ್ದಾರೆ. ವಿರೋಧ ಪಕ್ಷದ ನಾಯಕರು ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು