ಬೆಳಗಾವಿ: ಬೈಕ್ ಸವಾರರನ್ನು ನಾಯಿಯೊಂದು ಬೆನ್ನಟ್ಟಿಕೊಂಡು ಬಂದಿದ್ದು, ಗಾಬರಿಗೊಂಡ ಸವಾರ ಮನೆ ಗೋಡೆಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಯೊಂದು ಮೋಟಾರ್ ಸೈಕಲ್ ಅನ್ನು ಬೆನ್ನಟ್ಟಿದ ಪರಿಣಾಮ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದು 44 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ವಿಶ್ವನಾಥ್ ಶಿರೋಲ್ ಎಂದು ಗುರುತಿಸಲಾಗಿದೆ. ಈ ಘಟನೆ ಜನವರಿ 15 ರಂದು ಕುಂಬಾರ ಗಲ್ಲಿ ಪ್ರದೇಶದಲ್ಲಿ ನಡೆದಿದ್ದರೂ, ಇತ್ತೀಚೆಗೆ ಮನೆಯ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೊದಲಿಗೆ ಇದು ಸಾಮಾನ್ಯ ಅಪಘಾತ ಎಂದು ಜನರು ಭಾವಿಸಿದ್ದರು. ಆದರೆ ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಯಿಯು ಬೆನ್ನಟ್ಟಿಕೊಂಡು ಬರುತ್ತಿದ್ದು ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಹಠಾತ್ ಮೂರ್ಛೆ: ಚಳಿಗಾಲದಲ್ಲಿ ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸದಿರಿ
ಶಿರೋಲ್ ಅವರ ಕುಟುಂಬದವರ ಪ್ರಕಾರ ಅವರಿಗೆ ನಾಯಿಗಳ ಬಗ್ಗೆ ಹೆಚ್ಚು ಭಯ ಇತ್ತು. ಈ ಹಿಂದೆಯೂ ಒಮ್ಮೆ ಅವರಿಗೆ ನಾಯಿ ಕಚ್ಚಿ ಘಾಸಿಗೊಳಿಸಿತ್ತು. ಇದೀಗ ನಾಯಿಯಿಂದಲೇ ಸಾವು ಸಂಭವಿಸಿದೆ.
ಈ ಘಟನೆಯು ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಂಖ್ಯೆಯ ಬಗ್ಗೆ ಅಥಣಿ ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಸ್ಥಳೀಯ ಅಧಿಕಾರಿಗಳು ಬೀದಿಗಳನ್ನು ತೆರವುಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

