ಪ್ರೀತಿ ಹೆಸರಲ್ಲಿ ಬ್ಲ್ಯಾಕ್‌ಮೇಲ್: ಬೆಳಗಾವಿಯಲ್ಲಿ ವಂಚಕನ ಪತಂಗಾಟ!

ಬೆಳಗಾವಿ : ಪ್ರೀತಿಯ ನಾಟಕವಾಡಿ ಯುವತಿಯೊಬ್ಬರನ್ನು ನಂಬಿಸಿ, ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ದೋಚಿದ ಗಂಭೀರ ಪ್ರಕರಣವೊಂದು ಬೆಳಗಾವಿಯಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಇಂದು ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ.

ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತ ಫೇಸ್‌ಬುಕ್ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಈ ಸಂದರ್ಭದಲ್ಲಿ ಯುವತಿಗೆ ತಿಳಿಯದಂತೆ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಸಂತ್ರಸ್ತೆಯಿಂದ ಹಂತಹಂತವಾಗಿ 19 ಲಕ್ಷ ರೂಪಾಯಿ ಹಣವನ್ನು ಗೂಗಲ್ ಪೇ ಮೂಲಕ ಪಡೆದಿದ್ದಾನೆ.ತಂದೆಯ ಎಫ್‌ಡಿ ಹಣ ಹಾಗೂ ತಾಯಿಯ ಆಭರಣಗಳನ್ನೂ ಸೇರಿ ಸುಮಾರು 150 ಗ್ರಾಂ ಚಿನ್ನವನ್ನು ಈತ ಲೂಟಿ ಮಾಡಿದ್ದಾನೆ. ಇಷ್ಟೆಲ್ಲಾ ಆದರೂ ಮದುವೆಯಾಗಲು ಒಪ್ಪದ ಯುವಕನ ತಾಯಿ, “ಮದುವೆ ಮಾಡಿಕೊಳ್ಳಬೇಕಾದರೆ 3 ಕೋಟಿ ರೂಪಾಯಿ ವರದಕ್ಷಿಣೆ ನೀಡಬೇಕು” ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಸಂತ್ರಸ್ತೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಬೇಸಿಗೆಯ ಬಿಸಿಲಿಗೆ ತಂಪು ನೀಡುವ ‘ವೀಳ್ಯದೆಲೆ-ಗುಲ್ಕನ್ ಶರಬತ್’: ಮನೆಯಲ್ಲೇ ಸುಲಭವಾಗಿ ತಯಾರಿಸಿ!

ಶಹಾಪುರ ಪೊಲೀಸರು ಈ ಪ್ರಕರಣದಲ್ಲಿ ಆರೋಪಿಯ ಜೊತೆ ಶಾಮೀಲಾಗಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. “ಠಾಣೆಯಲ್ಲಿ ದೂರು ನೀಡಲು ಹೋದಾಗ ಸರಿಯಾಗಿ ಸ್ಪಂದಿಸುತ್ತಿಲ್ಲ. ಬ್ಯಾಂಕ್‌ನಿಂದ ರಿಕವರಿ ಮಾಡಿದ್ದ ಚಿನ್ನವನ್ನೇ ಮರಳಿ ಆರೋಪಿಗೇ ನೀಡಿದ್ದಾರೆ” ಎಂದು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಮನನೊಂದ ಮಹಿಳೆ ಇಂದು ಕಮಿಷನರ್ ಅವರ ಮೊರೆ ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು