ಬೆಳ್ತಂಗಡಿ: ಸ್ಕಾರ್ಪಿಯೋ ಸತೀಶ್ ನೆಲ್ಯಾಡಿಯಲ್ಲಿ ಅರೆಸ್ಟ್, ಕಿಶೋರ್‌ ಮೈಸೂರಿನಲ್ಲಿ ಬಂಧನ

beltangady-police-arrest-two-absconding-accused

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೊದಲ ಪ್ರಕರಣದಲ್ಲಿ, ಕಳ್ಳತನ ಪ್ರಕರಣವೊಂದರಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸತೀಶ್ ಅಲಿಯಾಸ್ ‘ಸ್ಕಾರ್ಪಿಯೋ ಸತೀಶ್’ (35) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ನಿವಾಸಿಯಾಗಿರುವ ಆರೋಪಿಯನ್ನು ಧರ್ಮಸ್ಥಳ ಉಪನಿರೀಕ್ಷಕ ಸಮರ್ಥ್ ಹಾಗೂ ಬೆಳ್ತಂಗಡಿ ಉಪನಿರೀಕ್ಷಕ ಸಿಕಂದರ್ ಪಾಶಾ ನೇತೃತ್ವದ ತಂಡ ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಬಳಿಕ ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಬಂಟ್ವಾಳದಲ್ಲಿ ಕಳ್ಳತನ: ಚಿನ್ನ, ನಗದು ಮತ್ತು ಬೆಳ್ಳಿ ಮೂರ್ತಿ ದೋಚಿ ಪರಾರಿ

ಪೊಲೀಸರ ಮಾಹಿತಿ ಪ್ರಕಾರ, ‘ಸ್ಕಾರ್ಪಿಯೋ ಸತೀಶ್’ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು, ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

ಇನ್ನೊಂದು ಪ್ರಕರಣದಲ್ಲಿ, ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಸ್.ಎನ್. ಕಿಶೋರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಹಾಗೂ ವೃತ್ತ ನಿರೀಕ್ಷಕ ರವಿ ಬಿ.ಎಸ್. ಮಾರ್ಗದರ್ಶನದಲ್ಲಿ, ಧರ್ಮಸ್ಥಳ ಉಪನಿರೀಕ್ಷಕ ಸಮರ್ಥ್ ನೇತೃತ್ವದ ತಂಡ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಬಳಿಕ ಕಿಶೋರ್‌ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು