Breaking News

Belthangadi : ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪ: ಸೌಜನ್ಯಳ ಮಾವನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ನಿಂದನೆ ಆರೋಪ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶ ಉಲ್ಲಂಘಸಿದ ಸೌಜನ್ಯಳ ಮಾವ ಪಾಂಗಳದ ವಿಠಲ ಗೌಡ ಅವರಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.

ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆಗೆ ಒಳಪಟ್ಟ ಘಟನೆ ನಂತರವೂ ಕೆಲವು ಹಂತಗಳಲ್ಲಿ ವಿಚಾರಣೆ ಮುಂದುವರಿದಿದ್ದು, ಇತ್ತೀಚೆಗೆ ವಿಠಲ ಗೌಡ (ಸೌಜನ್ಯ ಅವರ ಮಾವ) ಹೆಸರು ಕೇಳಿ ಬರುತ್ತಿದೆ.

Advertisement

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಕೃಷ್ಣ ಎಂಬವರು ಘಟನೆಯ ಹೊರತಾಗಿ,‌ ಪ್ರಕರಣದಲ್ಲಿ ಆಕೆಯ ಸೋದರಮಾವ ವಿಠಲ ಗೌಡನೇ ಪ್ರಮುಖ ಆರೋಪಿ ಎಂದು ಆರೋಪಿಸಿದ್ದರು. ಅಲ್ಲದೆ, ಪ್ರಕರಣದ ಮರುತನಿಖೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಅಲ್ಲದೆ, ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬಸ್ಥರ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡುತ್ತಿದ್ದ ವಿಠಲ ಗೌಡ ಅವರಿಗೆ “ಅವಹೇಳನಕಾರಿ ಹೇಳಿಕೆ ನೀಡದಂತೆ” ಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು. ಈ ಅದೇಶವನ್ನು ಉಲ್ಲಂಘಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಠಲ ಗೌಡರಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶಿಸಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಈ ಮಹತ್ವದ ಆದೇಶ ಹೊರಡಿಸಿದೆ. ದೂರುದಾರರ ಪರ ನ್ಯಾಯವಾದಿ ರಾಜಶೇಖ‌ರ್ ಹಿಲ್ಯಾರ್ ವಾದ ಮಂಡಿಸಿದ್ದರು.

ಇದನ್ನೂ ಓದಿ : Belagavi: ನಗ್ನ ಫೋಟೊ ವೈರಲ್ ಮಾಡುವುದಾಗಿ ಬೆದರಿಸಿ ಅತ್ಯಾಚಾರ, ಆರೋಪಿಗೆ ಶಿಕ್ಷೆ

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು