ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಿವಾಸಿ ಎಸ್. ಎನ್. ಚಂದ್ರೇಗೌಡ ಎಂದು ಗುರುತಿಸಲಾಗಿದೆ. 2009ರಲ್ಲಿ ಜೈವಿಕ ಅನಿಲ ಸಂಪರ್ಕ ಕಲ್ಪಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ವಿಶ್ವಾಸಾರ್ಹ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ಜನವರಿ 20ರಂದು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ನಂತರ ಅವರನ್ನು ಬೆಳ್ತಂಗಡಿಗೆ ಕರೆತರಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಇದರಿಂದ ಪೋಲಿಸರ ಕರ್ತವ್ಯ ನಿಷ್ಟೆಗೆ ಇದೊಂದು ಮಾದರಿ ಘಟನೆಯೆನ್ನಬಹುದು.
ಇದನ್ನೂ ಓದಿ : Puttur : ಪ್ರಚೋದನಕಾರಿ ಭಾಷಣ: ಮತ್ತೆ ಪ್ರಭಾಕರ್ ಭಟ್ ವಿರುದ್ಧ FIR
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

