ಬೆಳ್ತಂಗಡಿ: ತಾಲ್ಲೂಕಿನ ಗುರುವಾಯನಕೆರೆ ಸಮೀಪದ ಅಲಾಡಿಕೊಟ್ಟಿಗೆ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ ಹತ್ಯೆಯಾಗಿರುವುದನ್ನು ದೃಢಪಡಿಸಿಕೊಂಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬಂಟ್ವಾಳದ ಪೆರ್ನೆ ನಿವಾಸಿ ನಿತಿನ್ (34) ಎಂಬುವರು ನೀಡಿದ ದೂರಿನ ಪ್ರಕಾರ, ಜೂನ್ 1 ರ ಸೋಮವಾರ ಮುಂಜಾನೆ ಅವರ ವಾಟ್ಸಾಪ್‌ಗೆ (WhatsApp) ಸಂದೇಶವೊಂದು ಬಂದಿತ್ತು. ಆ ಸಂದೇಶದಲ್ಲಿ ಬೆಳ್ತಂಗಡಿಯ ಗುರುವಾಯನಕೆರೆ ಸಮೀಪದ ಅಲಾಡಿಕೊಟ್ಟಿಗೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಮಾಹಿತಿ ಮತ್ತು ಫೋಟೋಗಳಿದ್ದವು.
Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕನಿಗೆ ಶಿಕ್ಷೆ ಪ್ರಕಟ
ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಭಾಗವಾಗಿ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಸದರಿ ವ್ಯಕ್ತಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಹೊಡೆದು ಸಾಯಿಸಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಮೃತರ ಗುರುತು ಪತ್ತೆ ಹಚ್ಚಲು ಮತ್ತು ಕೊಲೆಗಡುಕರನ್ನು ಬಂಧಿಸಲು ಬಲೆ ಬೀಸಿದ್ದಾರೆ.
ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


