Breaking News

Belthangady: ನಿಗೂಢವಾಗಿ ಸಾವನ್ನಪ್ಪಿದ ಸುಮಂತ್ ಕೇಸ್‌ಗೆ ಟ್ವಿಸ್ಟ್: ಕೆರೆಯಲ್ಲಿ ಮಾರಕಾಸ್ತ್ರ ಪತ್ತೆ

Belthangady death

ಬೆಳ್ತಂಗಡಿ: ಧನುರ್ಮಾಸ ಪೂಜೆಗೆಂದು ಮನೆಯಿಂದ ತೆರಳಿದ್ದ ಬಾಲಕ ನಂತರ ನಿಗೂಢವಾಗಿ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಪ್ರದೇಶದಲ್ಲಿ ನಡೆದಿತ್ತು. ನಂತರ ಬಾಲಕನ ಶವ ತೋಟದ ಕೆರೆಯಲ್ಲಿ ಪತ್ತೆಯಾಗಿದ್ದು, ಈ ಬಾಲಕನ ಸಾವಿನ ಬಗ್ಗೆ ಈಗ ತೀವ್ರ ಅನುಮಾನಗಳು ಮೂಡಿವೆ. ಜೊತೆಗೆ ಬಾಲಕನ ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಹಾಗೂ ಟಾರ್ಚ್‌ ಪತ್ತೆಯಾಗಿದೆ. ತಲೆಯಲ್ಲಿ ಬಲವಾಗಿ ಹೊಡೆದ ಗಾಯದ ಗುರುತುಗಳಿದ್ದು, ಇದು ಆಕಸ್ಮಿಕವಾಗಿ ಸಂಭವಿಸಿದ ಸಾವು ಅಲ್ಲ, ಇದೊಂದು ಕೊಲೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ ಎನ್ನಲಾಗಿದೆ.

ಪೂಜೆಗೆಂದು ಹೊರಟ ಸುಮಂತ್ ನಾಪತ್ತೆ

Advertisement

ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ 16 ವರ್ಷದ ಸುಮಂತ್ ಮೃತಪಟ್ಟ ಬಾಲಕ, ಸುಮಂತ್ ಗೇರುಕಟ್ಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಧನುರ್ಮಾಸದ ಪೂಜೆಗಾಗಿ ಮುಂಜಾನೆ ಸುಮಾರು 5 ಗಂಟೆಗೆ ಮನೆ ಸಮೀಪದ ಕಳಿಯ ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗಿದ್ದ ಅತ್ತ ದೇವಸ್ಥಾನವನ್ನೂ ತಲುಪಿರಲಿಲ್ಲ, ಇತ್ತ ಮರಳಿ ಮನೆಗೂ ಬಂದಿರಲಿಲ್ಲ. ಆತನ ಜೊತೆ ನಿತ್ಯವೂ ಧನುಪೂಜೆಯಲ್ಲಿ ಭಾಗವಹಿಸುತ್ತಿದ್ದ ಆತನ ಗೆಳೆಯರು ಆತ ದೇವಸ್ಥಾನಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಕೆರೆಯಲ್ಲಿ ಶವವಾಗಿ ಪತ್ತೆ

ಆರಂಭದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂಬ ಅನುಮಾನ ಶುರುವಾಗಿತ್ತು. ಆದರೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಶ್ವಾನದಳ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಶವ ಬುಧವಾರ ಬೆಳಗ್ಗೆ 11.30ರ ಸುಮಾರಿಗೆ  ಕೆರೆಯಲ್ಲಿ ಪತ್ತೆಯಾಗಿತ್ತು. ಬಾಲಕನ ಶವ ಪತ್ತೆಯಾದ ಕೆರೆ ಸುಮಂತ್‌ನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿದೆ.

ಇದನ್ನೂ ಓದಿ: Scheme : ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ: ಎಂಡಿ ಅಶ್ರಫ್ ವಿರುದ್ಧ ಕ್ರಮಕ್ಕೆ ಆಗ್ರಹ

ಮರಣೋತ್ತರ ಪರೀಕ್ಷೆಯಲ್ಲಿ ಕೆಲವು ರಹಸ್ಯ ಬಯಲು

ನಂತರ ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು.

ಮರಣೋತ್ತರ ಪರೀಕ್ಷಾ ವರದಿ ಈಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ. ವರದಿಯ ಪ್ರಕಾರ ಸುಮಂತ್‌ನ ತಲೆಯ ಹಿಂಭಾಗ ಕತ್ತಿ ಅಥವಾ ಬಲವಾದ ಆಯುಧದಿಂದ ಹೊಡೆದಂತಹ ಗುರುತು ಇರುವುದು ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆ ವರದಿಯ ನಂತರ ಪೊಲೀಸರು ತಾವು ದಾಖಲಿಸಿದ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವೆಂದು ಬದಲಾಯಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಇರುವಂತೆ ಬಾಲಕ ಉಸಿರುಕಟ್ಟಿ ಸಾವನ್ನಪ್ಪಿದ್ದಾನೆ. ಆತ ಕೆರೆಗೆ ಬಿದ್ದಾಗ ಬದುಕಿದ್ದ ಎಂಬ ಮಾಹಿತಿ ಇದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಂತ್ ದೇಹ ಪತ್ತೆಯಾದಾಗ ಕಾಲಿನಲ್ಲಿ ಚಪ್ಪಲಿಗಳಿದ್ದವು. ಹೀಗಾಗಿ ಪ್ರಜ್ಞೆ ತಪ್ಪಿದ ಸುಮಂತ್‌ನನ್ನು ಕೆರೆಯ ಬಳಿ ಎತ್ತಿಕೊಂಡು ಹೋಗಿ ಎಸೆಯಲಾಗಿದೆ ಎಂಬ ಅನುಮಾನ ಜನರಲ್ಲಿ ಮೂಡಿತ್ತು.

ಕೆರೆಯಲ್ಲಿ ಪತ್ತೆಯಾಯ್ತು ಟಾರ್ಚ್ ಮತ್ತು ಕತ್ತಿ

ಆದರೆ ಈಗ ಕೊಲೆ ಪ್ರಕರಣ ದಾಖಲಿಸಿ ತನಿಖೆಗಿಳಿದ ಪೊಲೀಸರು ಸುಮಂತ್ ಪತ್ತೆಯಾದ ಕೆರೆಯ ನೀರನ್ನು ಖಾಲಿ ಮಾಡಿಸಿದ್ದು, ಈ ವೇಳೆ ಕೆರೆಯಲ್ಲಿ ಒಂದು ಟಾರ್ಚ್ ಹಾಗೂ ಒಂದು ಕತ್ತಿ ಸಿಕ್ಕಿದ್ದು, ಇದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ. ಹೀಗಾಗಿ ಬೆಳ್ತಂಗಡಿ ಡಿಎಸ್ಪಿ ತನಿಖೆಗಿಳಿದ್ದು, ಕೊಲೆಗಾರರ ಪತ್ತೆಗೆ 4 ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಸುತ್ತಮುತ್ತಲಿನ ಜನರ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಆ ಟಾರ್ಚ್ ಹಾಗೂ ಕತ್ತಿ ಯಾರಿಗೆ ಸೇರಿದೆ ಎಂಬುದರ ಮೇಲೆ ಪ್ರಕರಣಕ್ಕೆ ತಿರುವು ಸಿಗಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು