ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಅಲ್ಲಾಲಸಂದ್ರ ಕ್ರಾಸ್ ಬಳಿ ರಸ್ತೆ ಸಂಚಾರದ ವಿಚಾರವಾಗಿ ಭೀಕರ ಗಲಾಟೆ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗವೇ ಮಹಿಳೆಯೊಬ್ಬರು ಮತ್ತು ಇಬ್ಬರು ಪುರುಷರ ನಡುವೆ ಮಾತಿನ ಚಕಮಕಿ ನಡೆದು, ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಉಂಟಾದ ಸಣ್ಣ ವಿವಾದವೊಂದು ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ. ಇಬ್ಬರು ವ್ಯಕ್ತಿಗಳು ಮತ್ತು ಒಬ್ಬ ಮಹಿಳೆ ಪರಸ್ಪರ ಕಿರುಚಾಡುತ್ತಾ, ಹೊಡೆದಾಟಕ್ಕೆ ಮುಂದಾದ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿವೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ತಂದೆಯನ್ನೇ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಮುಂದಾದ ಮಗಳು!
ಇಲ್ಲಿದೆ ನೋಡಿ ವಿಡಿಯೋ:
ಬಿಡುವಿಲ್ಲದ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ನಡೆದ ಈ ಘಟನೆಯಿಂದಾಗಿ ಉಳಿದ ವಾಹನ ಸವಾರರು ಕೆಲಕಾಲ ಪರದಾಡುವಂತಾಯಿತು. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟುಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

