ಬೆಂಗಳೂರು: ನಂದಿನಿ ಲೇಔಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಇಬ್ಬರು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರು!

ಬೆಂಗಳೂರು: ಸಿಲಿಕಾನ್ ಸಿಟಿಯ ನಂದಿನಿ ಲೇಔಟ್‌ನಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಭೀಕರ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಮೈ ಜುಂ ಎನಿಸುವಂತಿದ್ದು, ಇಬ್ಬರು ಬೈಕ್ ಸವಾರರು ಸಾವಿನ ದವಡೆಯಿಂದ ಅದ್ಭುತವಾಗಿ ಪಾರಾಗಿದ್ದಾರೆ.

ನಂದಿನಿ ಲೇಔಟ್‌ನ ಜನನಿಬಿಡ ರಸ್ತೆಯಲ್ಲಿ ಚಲಿಸುತ್ತಿದ್ದ ಸಿಲಿಂಡರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದಿಢೀರ್ ಪಕ್ಕಕ್ಕೆ ವಾಲಿ ಪಲ್ಟಿಯಾಗಿದೆ. ಲಾರಿ ಉರುಳುವ ಸಮಯದಲ್ಲಿ ಅದರ ಪಕ್ಕದಲ್ಲೇ ಇಬ್ಬರು ಬೈಕ್ ಸವಾರರು ಸಂಚರಿಸುತ್ತಿದ್ದರು. ಲಾರಿ ಅವರ ಮೇಲೆಯೇ ಬೀಳುವ ಹಂತಕ್ಕೆ ಬಂದಿದ್ದರೂ, ಅದೃಷ್ಟವಶಾತ್ ಇಬ್ಬರೂ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:


ಲಾರಿಯಲ್ಲಿ ಗ್ಯಾಸ್ ಸಿಲಿಂಡರ್‌ಗಳಿದ್ದ ಕಾರಣ ಸುತ್ತಮುತ್ತಲಿನ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿತ್ತು. ದೊಡ್ಡ ಮಟ್ಟದ ಅನಾಹುತ ಸಂಭವಿಸಬಹುದೆಂಬ ಭೀತಿ ಎದುರಾಗಿತ್ತು. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಏರಿಯಾವನ್ನು ಸುರಕ್ಷಿತಗೊಳಿಸಿದ್ದಾರೆ.

ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು ಸರಗಳ್ಳತನ: ಮಾಗಡಿಯಲ್ಲಿ ಹಾಡಹಗಲೇ ಮಹಿಳೆಯ ಚಿನ್ನದ ಸರ ಲೂಟಿ!

ವಸತಿ ಪ್ರದೇಶಗಳಲ್ಲಿ ಇಂತಹ ಭಾರೀ ವಾಹನಗಳ ಸಂಚಾರ ಮತ್ತು ಅತಿವೇಗ ಜನಸಾಮಾನ್ಯರ ಜೀವಕ್ಕೆ ಸಂಚಕಾರ ತರುತ್ತಿವೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು