ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸ್ ಸೈರ್ನ್; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳ ಗಡಿಪಾರು!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಮತ್ತು ಯಾವುದೇ ದಾಖಲೆಗಳಿಲ್ಲದೆ ವಾಸವಿದ್ದ ವಿದೇಶಿ ಪ್ರಜೆಗಳ ಮೇಲೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಿ ಅವರ ದೇಶಗಳಿಗೆ ವಾಪಸ್ ಕಳುಹಿಸಲು (ಗೇಟ್​​ಪಾಸ್) ಸಿದ್ಧತೆ ನಡೆಸಲಾಗಿದೆ.

ಬೆಂಗಳೂರಿನ ಪೂರ್ವ ಮತ್ತು ಈಶಾನ್ಯ ವಿಭಾಗಗಳಲ್ಲಿ ಪೊಲೀಸರು ಮನೆ ಮನೆಗೆ ತೆರಳಿ ವಿದೇಶಿ ಪ್ರಜೆಗಳ ವೀಸಾ ಮತ್ತು ಪಾಸ್‌ಪೋರ್ಟ್ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಶಿಕ್ಷಣ ಅಥವಾ ಪ್ರವಾಸೋದ್ಯಮ ವೀಸಾದ ಮೇಲೆ ಬಂದು, ಅವಧಿ ಮುಗಿದ ನಂತರವೂ ಅಕ್ರಮವಾಗಿ ನೆಲೆಸಿದ್ದ ಆಫ್ರಿಕನ್ ಮತ್ತು ಇತರ ರಾಷ್ಟ್ರಗಳ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದವರನ್ನು ಸದ್ಯಕ್ಕೆ ನೆಲಮಂಗಲ ಬಳಿಯ ಡಿಟೆನ್ಶನ್ ಸೆಂಟರ್‌ನಲ್ಲಿ ಇರಿಸಲಾಗಿದ್ದು, ಕಾನೂನು ಪ್ರಕ್ರಿಯೆ ಮುಗಿದ ನಂತರ ಗಡಿಪಾರು ಮಾಡಲಾಗುವುದು. ವಿದೇಶಿಯರಿಗೆ ಬಾಡಿಗೆ ಮನೆ ನೀಡುವಾಗ ಕಡ್ಡಾಯವಾಗಿ ಪೊಲೀಸರಿಗೆ ಮಾಹಿತಿ ನೀಡದ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು