ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಗೆ ಚಾಕಲೇಟ್ ನೀಡಿ ಪ್ರಪೋಸ್ ಮಾಡಿದ ಅಧ್ಯಾಪಕ! ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು

ಬೆಂಗಳೂರು: ರಾಜಧಾನಿಯ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ ಅಧ್ಯಾಪಕ ಅಬ್ದುಲ್ ಎಂಬಾತನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ.ಪ್ರಾಧ್ಯಾಪಕ ಅಬ್ದುಲ್ ತರಗತಿ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಚಾಕಲೇಟ್ ನೀಡಿ ಪ್ರಪೋಸ್ ಮಾಡಿದ್ದಾನೆ. ಅಧ್ಯಾಪಕನ ಈ ವರ್ತನೆಯನ್ನು ವಿದ್ಯಾರ್ಥಿನಿ ತಕ್ಷಣವೇ ಆಕ್ಷೇಪಿಸಿದ್ದಾಳೆ.

ಇದನ್ನೂ ಓದಿ: ಬಜ್ಪೆ: ಕಾರಿನಲ್ಲಿ ಗೋವುಗಳ ಕ್ರೂರ ಸಾಗಾಟ, ಇಬ್ಬರು ಆರೋಪಿಗಳ ಬಂಧನ

ಇಲ್ಲಿದೆ ನೋಡಿ:

ವಿಷಯ ತಿಳಿಯುತ್ತಿದ್ದಂತೆ ಕಾಲೇಜಿನ ಇತರೆ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದಾರೆ. ಕಾಲೇಜು ಆವರಣದಲ್ಲೇ ಅಬ್ದುಲ್‌ನನ್ನು ಹಿಗ್ಗಾಮುಗ್ಗಾ ಥಳಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿಗಳಿಂದ ಗೂಸಾ ತಿಂದ ಬಳಿಕ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಈತ ತಲೆಮರೆಸಿಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು