ದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಇಂದು ದೊಡ್ಡ ಹಿನ್ನಡೆಯಾಗಿದೆ. ಅವರ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ.
ದರ್ಶನ್ ಪರ ವಕೀಲರು ಮತ್ತು ಸರ್ಕಾರದ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಅವರ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಈ ಹಂತದಲ್ಲಿ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ಗಂಭೀರತೆ ಮತ್ತು ಸಾಕ್ಷ್ಯಾಧಾರಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಹೊಸ ಲಿಕ್ಕರ್ ಪಾಲಿಸಿ ಜಾರಿ: ಬಿಯರ್ ಮತ್ತು ಸ್ಕಾಚ್ ಬೆಲೆ ಭಾರಿ ಇಳಿಕೆ; ಜನಸಾಮಾನ್ಯರ ಮದ್ಯ ದುಬಾರಿ!
ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ. ಅಂದರೆ, ಪ್ರಕರಣದ ವಿಚಾರಣೆಯು ಒಂದು ವರ್ಷದೊಳಗೆ ಪೂರ್ಣಗೊಳ್ಳುವ ಸಾಧ್ಯತೆಯನ್ನು ನ್ಯಾಯಾಲಯ ಪರಿಗಣಿಸಿದೆ. ಅಲ್ಲಿಯವರೆಗೆ ದರ್ಶನ್ ಅವರು ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತೀರ್ಪು ದರ್ಶನ್ ಅಭಿಮಾನಿಗಳಿಗೆ ಮತ್ತು ಕುಟುಂಬಸ್ಥರಿಗೆ ಭಾರಿ ನಿರಾಸೆ ಮೂಡಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


