ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ ಎಂದು ಭಾರತೀಯ ಜನತಾ ಪಾರ್ಟಿ (BJP) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದ ದೇವಸ್ಥಾನದ ಪವಿತ್ರ ಆವರಣದಲ್ಲಿಯೇ ಬಹಿರಂಗವಾಗಿ ಜೂಜಾಟ (ಇಸ್ಪೀಟ್) ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಶೇರ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ: ಕೆಇಎ ಮಹತ್ವದ ಪ್ರಕಟಣೆ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಪವಿತ್ರ ದೇವಸ್ಥಾನದ ಆವರಣದಲ್ಲೇ ಯಾವುದೇ ಭಯವಿಲ್ಲದೆ ಇಸ್ಪೀಟ್ ಜೂಜಾಟ ನಡೆಯುತ್ತಿರುವುದು ಸ್ಥಳೀಯರ ಹಾಗೂ ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಃ ಸಂಪುಟ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲೇ ಇಂತಹ ಕಾನೂನುಬಾಹಿರ ಕೃತ್ಯಗಳು ಮುಕ್ತವಾಗಿ ನಡೆಯುತ್ತಿವೆ.
” @INCKarnataka ದುರಾಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದ ದೇವಸ್ಥಾನದ ಪವಿತ್ರ ಆವರಣದಲ್ಲೇ ಬಹಿರಂಗವಾಗಿ ಜೂಜಾಟ (ಇಸ್ಪೀಟ್) ನಡೆಯುತ್ತಿದ್ದರೂ ಪೋಲಿಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ.
ಸ್ವತಃ ಗೃಹ ಸಚಿವ @PriyankKharge… pic.twitter.com/w3MTFAlMzk
— Janata Dal Secular (@JanataDal_S) August 6, 2026
ಸಚಿವರ ಸ್ವಕ್ಷೇತ್ರದಲ್ಲೇ ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿದ್ದರೆ, ರಾಜ್ಯದ ಸಾಮಾನ್ಯ ಜನರಿಗೆ ರಕ್ಷಣೆ ಎಲ್ಲಿದೆ ಎಂದು ಬಿಜೆಪಿ ಪ್ರಶ್ನಿಸಿದೆ.

