ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದಿಗ್‌ವಿಜಯ: ಕಾರ್ಯಕರ್ತರ ತ್ಯಾಗ-ಬಲಿದಾನ ಸ್ಮರಿಸಿದ ಸಂಸದ ಕ್ಯಾ.ಚೌಟ

ಮಂಗಳೂರು: ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು, ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಉತ್ತಮ ಸಾಧನೆ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಮೇಲಿರುವ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಸಾಧನೆ ಕುರಿತು ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ತ್ಯಾಗ, ಹೋರಾಟ ಮತ್ತು ಅಚಲ ಸಂಕಲ್ಪವೇ ಈ ಗೆಲುವಿನ ಹಿಂದಿರುವ ಪ್ರಮುಖ ಕಾರಣ ಎಂದು ಹೇಳಿದರು. ತೃಣಮೂಲ ಕಾಂಗ್ರೆಸ್ ಆಡಳಿತದ ಸವಾಲುಗಳ ನಡುವೆಯೂ ಬಿಜೆಪಿ ಕಾರ್ಯಕರ್ತರು ಎದೆಗುಂದದೆ ಪಕ್ಷವನ್ನು ಬಲಪಡಿಸಿರುವುದು ಐತಿಹಾಸಿಕ ಸಾಧನೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ತಮಿಳುನಡಿನಲ್ಲಿ ದಳಪತಿ ವಿಜಯ್ ಪಕ್ಷದ ಅಶ್ವಮೇಧ: ಸಿಎಂ ಸ್ಟಾಲಿನ್, ಡಿಸಿಎಂ ಉದಯನಿಧಿಗೆ ಸೋಲು

ಇನ್ನೂ, ಪಂಚರಾಜ್ಯಗಳಲ್ಲಿ ಪಕ್ಷದ ಅದ್ಭುತ ಪ್ರದರ್ಶನದ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯತಂತ್ರ ಹಾಗೂ ರಾಷ್ಟ್ರೀಯ ಏಕತೆಗೆ ಅವರ ಬದ್ಧತೆ ಪ್ರಮುಖವಾಗಿದೆ ಎಂದು ಹೇಳಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸಂಘಟನಾ ಶಕ್ತಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿ, ಬಂಗಾಳದಿಂದ ಪುದುಚೇರಿವರೆಗೆ ಪಕ್ಷದ ನೆಲೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.

ಒಟ್ಟಾರೆ, ಪಂಚರಾಜ್ಯ ಚುನಾವಣಾ ಫಲಿತಾಂಶಗಳು ಎನ್‌ಡಿಎ ಮೈತ್ರಿಕೂಟದ ವಿಶ್ವಾಸಾರ್ಹತೆ ಹಾಗೂ ಪಾರದರ್ಶಕ ಆಡಳಿತದ ಜಯವಾಗಿದೆ. ದೇಶದಾದ್ಯಂತ ಬಿಜೆಪಿ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಈ ಫಲಿತಾಂಶಗಳು ಮಹತ್ವದ ಪಾತ್ರ ವಹಿಸಿದ್ದು, ರಾಷ್ಟ್ರದ ಅಭಿವೃದ್ಧಿ ಹಾದಿಯಲ್ಲಿ ಜನರು ಮೋದಿಯವರ ನಾಯಕತ್ವವನ್ನು ಸಂಪೂರ್ಣವಾಗಿ ಸ್ವೀಕರಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಈ ಐತಿಹಾಸಿಕ ಜನಾದೇಶ ನೀಡಿದ ಮತದಾರರಿಗೆ ಹಾಗೂ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರಿಗೆ ಬ್ರಿಜೇಶ್ ಚೌಟ ಅವರು ಅಭಿನಂದನೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು