Breaking News

ಬಾಂಗ್ಲಾದೇಶ: ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರಿದ ಬಿಎನ್‌ಪಿ

ಢಾಕಾ: 2024ರ ಆಗಸ್ಟ್‌ನಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನಗೊಂಡ ಬಳಿಕ ಅಧಿಕಾರ ವಹಿಸಿಕೊಂಡಿದ್ದ ಮಧ್ಯಂತರ ಸರ್ಕಾರವನ್ನು ಬದಲಿಸಲು ನಡೆದ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಗೆಲುವಿನತ್ತ ಸಾಗಿದೆ.

ಒಟ್ಟು 300 ಸದಸ್ಯರ ಸಂಖ್ಯಾ ಬಲದ ಬಾಂಗ್ಲಾ ಸಂಸತ್ತಿನಲ್ಲಿ ಬಿಎನ್‌ಪಿ 151ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಸ್ಪಷ್ಟ ಬಹುಮತ ದಾಖಲಿಸಿದೆ.

Advertisement

ಇದನ್ನೂ ಓದಿಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್​​​ಪಿ ಪಕ್ಷ ಭರ್ಜರಿ ಜಯ: ಪ್ರಧಾನಿ ಮೋದಿ ಶುಭಾಶಯ

300 ಕ್ಷೇತ್ರಗಳ ಪೈಕಿ ಬಿಎನ್‌ಪಿ ಸ್ಪಷ್ಟ ಬಹುಮತ ದಾಖಲಿಸಿದೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವಾಮಿ ಲೀಗ್ ಪಕ್ಷದ ವಿಸರ್ಜನೆಯ ಬಳಿಕ, ಅದರ ಅನುಪಸ್ಥಿತಿಯಲ್ಲಿ ಬಿಎನ್‌ಪಿ ಮತ್ತು ಅದರ ಈ ಹಿಂದಿನ ಮಿತ್ರ ಪಕ್ಷ ಜಮಾತ್-ಇ-ಇಸ್ಲಾಮಿ ಪಕ್ಷಗಳ ನಡುವೆ ನೇರ ಸ್ಪರ್ಧೆ ಎದುರಾಗಿತ್ತು.

ಬಿಎನ್‌ಪಿ ಚುನಾವಣೆಯಲ್ಲಿ ಬಹುಮತ ಸಾಧಿಸಿದರೆ, ಅದರ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರು ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಬಿಎನ್‌ಪಿ ಈ ಹಿಂದೆಯೇ ಘೋಷಣೆ ಮಾಡಿದೆ.

300 ಲೋಕಸಭಾ ಕ್ಷೇತ್ರಗಳ ಪೈಕಿ 299 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 2,000ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದರು. ಚುನಾವಣೆ ನಡುವೆ ಓರ್ವ ಅಭ್ಯರ್ಥಿ ನಿಧನರಾದ ಹಿನ್ನೆಲೆ ಆ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು