ಉಪ್ಪಿನಂಗಡಿಯಲ್ಲಿ ನೂತನ ಟೋಲ್ ಉದ್ಘಾಟನೆ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ : ಉಪ್ಪಿನಂಗಡಿ ಬಳಿ ನೂತನ ಟೋಲ್ ಗೇಟ್ ಗುರುವಾರ (ನವೆಂಬರ್ 26) ಉದ್ಘಾಟನೆಯಾದ ಬೆನ್ನಲ್ಲೇ, ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಎಸ್‌ಡಿಪಿಐ (SDPI) ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್‌ಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕ್ಯಾಮೆರಾ ಜಖಂಗೊಳಿಸಿ, ಬೂಮ್ ಬ್ಯಾರಿಯರ್ ಕಿತ್ತು ಶುಲ್ಕ ಸಂಗ್ರಹಿಸದೆಯೇ ವಾಹನಗಳನ್ನು ಉಚಿತವಾಗಿ ಬಿಟ್ಟು ಕಳುಹಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್‌ನಲ್ಲಿ ದಿಢೀರ್ ಮುತ್ತಿಗೆ; ಪೊಲೀಸರಿಂದ ಕಾರ್ಯಕರ್ತರು ವಶಕ್ಕೆ:

Advertisement

ಇಂದು ಉಪ್ಪಿನಂಗಡಿ ಸಮೀಪ ಹೊಸ ಟೋಲ್ ಗೇಟ್ ಕಾರ್ಯಾರಂಭ ಮಾಡಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಬಿ.ಸಿ. ರೋಡ್ ಹಾಗೂ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾಗೆ ಮುತ್ತಿಗೆ ಹಾಕಿದರು. ಏಕಾಏಕಿ ಟೋಲ್ ಗೇಟ್ ಒಳನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ಕ್ಯಾಮೆರಾಗಳನ್ನು ಜಖಂಗೊಳಿಸಿದ್ದಾರೆ. ಬಳಿಕ ಬೂಮ್ ಬ್ಯಾರಿಯರ್‌ಗಳನ್ನು ಕಿತ್ತು ಹಾಕಿದ ಕಾರ್ಯಕರ್ತರು, ಯಾವುದೇ ಟೋಲ್ ಶುಲ್ಕ ಸಂಗ್ರಹಿಸದಂತೆ ತಡೆದು ವಾಹನಗಳನ್ನು ಫ್ರೀಯಾಗಿ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಟೋಲ್ ಸಿಬ್ಬಂದಿಗೂ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಪ್ರತಿಭಟನೆ ನಡೆಸುತ್ತಿದ್ದ ಎಸ್‌ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement