ಸರಣಿ ಅಪಘಾತಗಳಿಗೆ ಬ್ರೇಕ್ ಖಾಸಗಿ ಬಸ್‌ಗಳ ಮೇಲೆ ಕಠಿಣ ಕ್ರಮ

ಅಮರಾವತಿ :  ಇತ್ತೀಚೆಗೆ ನಡೆದ ಅನೇಕ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ, ಆಂದ್ರಪ್ರದೇಶ ರಾಜ್ಯ ಸಾರಿಗೆ ಸಚಿವರು ಖಾಸಗಿ ಬಸ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಖಾಸಗಿ  ಬಸ್‌ಗಳ ಮೇಲೆ ವಿಶೇಷ ಪರಿಶೀಲನಾ ದಾಳಿ ನಡೆಸಲಾಗುತ್ತಿದೆ. ಈ ವೇಳೆ ವಾಹನಗಳ ಫಿಟ್ನೆಸ್, ಚಾಲಕರ ಅರ್ಹತೆ, ವೇಗ ಮಿತಿ ಪಾಲನೆ, ಹಾಗೂ ಸುರಕ್ಷತಾ ನಿಯಮಗಳ ಅನುಸರಣೆ ಕುರಿತು ತೀವ್ರವಾಗಿ ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿಬಂಗಾರದ ಮನಸ್ಸಿನ ಸಂಜು ಸ್ಯಾಮ್ಸನ್: ಅಭಿಮಾನಿಗೆ 40 ಸಾವಿರ ರೂ. ಬೆಲೆಯ ಸ್ಮಾರ್ಟ್‌ಫೋನ್ ಉಡುಗೊರೆ!

ಪರಿಶೀಲನೆ ವೇಳೆ ನಿಯಮ ಉಲ್ಲಂಘಿಸಿದ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಗತ್ಯ ದಾಖಲೆಗಳು ಇಲ್ಲದ ಅಥವಾ ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಬಸ್‌ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಹಲವಾರು ಬಸ್‌ಗಳಿಗೆ ದಂಡ ವಿಧಿಸಲಾಗಿದೆ.

ಸಾರಿಗೆ ಸಚಿವರು ಈ ಕ್ರಮವು ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಹಾಗೂ ಸಾರ್ವಜನಿಕರ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕಠಿಣ ಪರಿಶೀಲನೆಗಳು ನಿರಂತರವಾಗಿ ನಡೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು