ಹಿಮಾಚಲ ಪ್ರದೇಶ : ಶುಕ್ರವಾರ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕುಪ್ವಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಪ್ರದೇಶದ ಬಳಿ ಪರ್ವತದಿಂದ ಉರುಳಿಬಿದ್ದಿದೆ ಎಂದು ಸಿರ್ಮೌರ್ ಎಸ್ಪಿ ನಿಶ್ಚಿಂತ್ ಸಿಂಗ್ ನೇಗಿ ತಿಳಿಸಿದ್ದಾರೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಡಿಯೋ ಇಲ್ಲಿದೆ ;

ಇದನ್ನೂ ಓದಿ :Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

