ಬಿಗ್ ಬ್ರೇಕಿಂಗ್: ಕರ್ನಾಟಕ ರಾಜಕೀಯದಲ್ಲಿ ಸಿದ್ದರಾಮಯ್ಯ ಯುಗಾಂತ್ಯ!; ಅಧಿಕೃತವಾಗಿ ರಾಜೀನಾಮೆ ಘೋಷಿಸಿದ ಸಿಎಂ; ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪಟ್ಟ ಬಹುತೇಕ ಫಿಕ್ಸ್!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ದಶಕದ ಅತಿ ದೊಡ್ಡ ಹೈಡ್ರಾಮಾ ಹಾಗೂ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು (ಮೇ 28, ಗುರುವಾರ) ಬೆಳಗ್ಗೆ ಸಿಎಂ ನಿವಾಸದಲ್ಲಿ ನಡೆದ ಸಚಿವರ ಮಹತ್ವದ ‘ಉಪಾಹಾರ ಕೂಟ’ದಲ್ಲಿ (Breakfast Meeting) ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ (Resignation) ಮಾಡಲಿರುವ ಐತಿಹಾಸಿಕ ನಿರ್ಧಾರವನ್ನು ಘೋಷಿಸುವ ಮೂಲಕ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಶಾಕ್ ನೀಡಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಸಲ್ಲಿಕೆ; ರಾಜಭವನಕ್ಕೆ ಸಿದ್ದರಾಮಯ್ಯ!:

ತಮ್ಮ ನಿರ್ಧಾರದ ಬೆನ್ನಲ್ಲೇ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಚುರುಕುಗೊಳಿಸಿರುವ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಸದ್ಯ ರಾಜ್ಯಪಾಲರು ಕೌಟುಂಬಿಕ ಕಾರಣಗಳಿಗಾಗಿ ಮುಂಬೈ ಪ್ರವಾಸದಲ್ಲಿದ್ದು, ಒಂದು ವೇಳೆ ಅವರು ಲಭ್ಯವಿಲ್ಲದಿದ್ದರೆ, ಅವರ ಅಧಿಕೃತ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ಸಿಎಂ ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಭಾವುಕರಾಗಿ ಆಲಿಂಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರಾಜಕೀಯದಲ್ಲಿ ನಡುರಾತ್ರಿ ಮಹಾ ಟ್ವಿಸ್ಟ್!: ಸಿಎಂ ಸಿದ್ದರಾಮಯ್ಯ ಇಂದು ರಾಜೀನಾಮೆ ನೀಡುವುದು ಡೌಟ್

ಇಷ್ಟೇ ಅಲ್ಲದೆ, ಪಕ್ಷದಲ್ಲಿ ಯಾವುದೇ ಭಿನ್ನಮತ ಸೃಷ್ಟಿಯಾಗದಂತೆ ತಡೆಯಲು ಸಿದ್ದರಾಮಯ್ಯ ಅವರೇ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಇಂದು ಸಂಜೆ ಅಥವಾ ನಾಳೆ ನಡೆಯಲಿರುವ ಮುಂದಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ (D.K. Shivakumar) ಅವರ ಹೆಸರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಪ್ರಸ್ತಾಪಿಸಲಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಈ ಮೂಲಕ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಆಡಳಿತ ಮುಕ್ತಾಯಗೊಂಡು, ರಾಜ್ಯದಲ್ಲಿ ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ಅವರ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು