Karnataka Budget 2026: ಜನಪರ ಮತ್ತು ಅಭಿವೃದ್ಧಿ ಪೂರಕ ಆಯವ್ಯಯ; ಮಾಜಿ ಸಚಿವ ಬಿ. ರಮಾನಾಥ್ ರೈ ಶ್ಲಾಘನೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಬಜೆಟ್ ರಾಜ್ಯದ ಸಮಗ್ರ ಪ್ರಗತಿಗೆ ಮುನ್ನುಡಿ ಬರೆದಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ್ ರೈ ಅಭಿಪ್ರಾಯಪಟ್ಟಿದ್ದಾರೆ. ಈ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರೈತರು, ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಜನರ ಏಳಿಗೆಗಾಗಿ ರೂಪಿಸಲಾದ ಯೋಜನೆಗಳು ಈ ಬಜೆಟ್‌ನ ಜೀವಾಳವಾಗಿದೆ.

ಮೀನುಗಾರಿಕೆ ಮತ್ತು ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಘೋಷಿಸಲಾದ ವಿಶೇಷ ಪ್ಯಾಕೇಜ್‌ಗಳು ಈ ಭಾಗದ ಆರ್ಥಿಕತೆಯನ್ನು ಬಲಪಡಿಸಲಿವೆ. ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ ಮತ್ತು ಪೊಲೀಸ್ ಸಿಬ್ಬಂದಿಗಳ ವಸತಿ ಯೋಜನೆಗಳಿಗೆ ನೀಡಿರುವ ಆದ್ಯತೆಯು ಕಾನೂನು ಸುವ್ಯವಸ್ಥೆ ಕಾಪಾಡಲು ಪೂರಕವಾಗಿದೆ.

Advertisement

ಇದನ್ನೂಓದಿ: ಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!

ಕೃಷಿ, ಅರಣ್ಯ ಸಂರಕ್ಷಣೆ, ಆರೋಗ್ಯ ಸೌಲಭ್ಯಗಳ ವಿಸ್ತರಣೆ, ಮುಜರಾಯಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಜೆಟ್‌ನಲ್ಲಿ ಗಣನೀಯ ಅನುದಾನ ಮೀಸಲಿಡಲಾಗಿದೆ.ಯುವಜನಾಂಗದ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣ ಕ್ಷೇತ್ರ ಮತ್ತು ಬಡವರ ಮನೆ ನಿರ್ಮಾಣದ ಕನಸಿನ ವಸತಿ ಯೋಜನೆಗಳಿಗೆ ನೀಡಿರುವ ಮಹತ್ವವನ್ನು ರೈ ಅವರು ಸ್ವಾಗತಿಸಿದ್ದಾರೆ.ಈ ಬಜೆಟ್ ಕೇವಲ ಅಂಕಿ-ಅಂಶಗಳ ಆಟವಲ್ಲ, ಇದು ಸಾಮಾಜಿಕ ನ್ಯಾಯದ ಹಾದಿಯಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು