Breaking News

ಕಲ್ಲಡ್ಕ: ಅಡ್ಡ ಬಂದ ದನ: ಡಿವೈಡರ್ ಮೇಲೆ ಹತ್ತಿದ KSRTC ಬಸ್!

ಕಲ್ಲಡ್ಕ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಬಳಿ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ 7 ಗಂಟೆಗೆ ಸಂಭವಿಸಿದೆ.

KA13 F 2364 ನಂಬರಿನ ಕೆಎಸ್ಆರ್‌ಟಿಸಿ ಬಸ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಸೂರಿಕುಮೇರು ಬಳಿ ಹಸು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಡಿವೈಡರ್ ಮೇಲೆ ಹತ್ತಿದೆ. ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದೆ.

Advertisement

ಇದನ್ನೂ ಓದಿ: 2026ರ ಗಣರಾಜ್ಯೋತ್ಸವ: ಸಂವಿಧಾನದ ಹೆಮ್ಮೆ ಮತ್ತು ಭಾರತದ ಏಕತೆಯ ಪ್ರತೀಕ

ಬಸ್ಸಿನಲ್ಲಿ 20 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳು ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರನ್ನು ಮತ್ತೊಂದು ಬಸ್ಸಿನಲ್ಲಿ ಕಳುಹಿಸಲಾಗಿದೆ ಎಂದು ಬಸ್ ಚಾಲಕ ಹಾಗೂ ನಿರ್ವಾಹಕರು G1 Newsಗೆ ತಿಳಿಸಿದ್ದಾರೆ.

ಸದ್ಯ, ಕ್ರೇನ್ ಸ್ಥಳಕ್ಕೆ ಬಂದಿದ್ದು, ಬಸ್ ತೆರವು ಕಾರ್ಯ ನಡೆಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು