ರಾಜಕೀಯ
ನಾಳೆಯಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ: ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ಮೊದಲ ಸೆಷನ್
ನಾಳೆಯಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ಜಿದ್ದಾಜಿದ್ದಿ ಎದುರಾಗುವ ನಿರೀಕ್ಷೆಯಿದೆ.
Read Moreಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್
ಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಎನ್. ಚಲುವರಾಯಸ್ವಾಮಿ ಅವರಿಗೆ ಕೃಷಿ, ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ಪ್ರಮುಖ ಸಚಿವರ ಖಾತೆಗಳ ಪಟ್ಟಿ ಇಲ್ಲಿದೆ.
Read Moreಬಸವರಾಜ ಹೊರಟ್ಟಿ ರಾಜೀನಾಮೆ: “ಸಿದ್ದರಾಮಯ್ಯ ಅವರ ಬಳಿ ಮಾತನಾಡಿದ್ದೆ, ಮಧ್ಯದಲ್ಲೇ ನಿರ್ಗಮಿಸುತ್ತಿರುವುದು ನೋವು ತಂದಿದೆ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೆ ಹಾಗೂ ಮಧ್ಯದಲ್ಲಿಯೇ ಸ್ಥಾನ ಬಿಡುತ್ತಿರುವುದು ನೋವು ತಂದಿದೆ ಎಂದು ಭಾವುಕರಾಗಿದ್ದಾರೆ.
Read Moreಮಹಾಲಿಂಗೇಶ್ವರ ಸನ್ನಿಧಿಯಲ್ಲಿ 30 ಕೋಟಿ ರೂ. ಮೌಲ್ಯದ ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ಯೋಜನೆ; ಶಾಸಕ ಅಶೋಕ್ ರೈ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ₹30 ಕೋಟಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸುವ ಶಾಸಕ ಅಶೋಕ್ ಕುಮಾರ್ ರೈ ನಿರ್ಧಾರಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ವಾಹನ ದಟ್ಟಣೆ ನಿಯಂತ್ರಣಕ್ಕೆ ರಸ್ತೆ ಅಗತ್ಯ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
Read More“ಆಡಳಿತ ಪಕ್ಷದ ಸಾಲು ಬೇಡ, ವಿಪಕ್ಷ ಸಾಲಿನಲ್ಲಿ ಸೀಟು ಕೊಡಿ”: ಸ್ಪೀಕರ್ಗೆ ಪತ್ರ ಬರೆಯಲು ಶಾಸಕ ಟಿ.ಬಿ. ಜಯಚಂದ್ರ ಸಿದ್ಧತೆ
ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಟಿ.ಬಿ. ಜಯಚಂದ್ರ ವಿಧಾನಸಭೆಯಲ್ಲಿ ವಿಪಕ್ಷ ಸಾಲಿನಲ್ಲಿ ಆಸನ ಕೋರಲು ಸಿದ್ಧರಾಗಿದ್ದು, ಕಾಂಗ್ರೆಸ್ನಲ್ಲಿ ಬಂಡಾಯ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
Read Moreರಾಜ್ಯದಲ್ಲಿ ಅತಿವೃಷ್ಟಿ-ಬರ ಎದುರಿಸಲು ಸರ್ಕಾರ ‘ಅಲರ್ಟ್’: ಸಚಿವರಿಗೆ ಜಿಲ್ಲಾ ಪ್ರವಾಸ ಮತ್ತು ತುರ್ತು ವರದಿ ಸಲ್ಲಿಕೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ
ರಾಜ್ಯದಲ್ಲಿ ಉದ್ಭವಿಸಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ವಾಸ್ತವ ವರದಿ ಪಡೆಯಲು ತಕ್ಷಣವೇ ಉಸ್ತುವಾರಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
Read Moreನಟಿ ತ್ರಿಷಾ ಕುರಿತು ವಿವಾದಾತ್ಮಕ ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿದ ತಮಿಳುನಾಡು ಪೊಲೀಸರು
ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಕಾಮೆಂಟ್ ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಸಿಎಂ ವಿಜಯ್ ನೇತೃತ್ವದ ಟಿವಿಕೆ ದೂರಿನ ಆಧಾರದ ಮೇಲೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
Read Moreಭ್ರಷ್ಟರು, ಪಬ್ ಗಲಾಟೆಕೋರರಿಗೆ ಮಂತ್ರಿಗಿರಿ: ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿವೈ ವಿಜಯೇಂದ್ರ ತೀವ್ರ ವಾಗ್ದಾಳಿ
ನೂತನ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದು, ವಾಲ್ಮೀಕಿ ಹಗರಣದ ಆರೋಪಿಗೆ ಮಂತ್ರಿಗಿರಿ ಹಾಗೂ 8 ಜಿಲ್ಲೆಗಳ ನಿರ್ಲಕ್ಷ್ಯವನ್ನು ಪ್ರಶ್ನಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Read Moreಸಂಪುಟ ವಿಸ್ತರಣೆ ಹೈಡ್ರಾಮಾ: 19 ಜನ ಮಾತ್ರ ಪ್ರಮಾಣವಚನ
ಕರ್ನಾಟಕ ಸಂಪುಟ ವಿಸ್ತರಣೆಯ 20 ಜನರ ಪಟ್ಟಿಯಲ್ಲಿದ್ದರೂ ಗಾಯತ್ರಿ ಶಾಂತೇಗೌಡ ಅವರು ಕೊನೆ ಕ್ಷಣದಲ್ಲಿ ರಾಜಕೀಯ ಬೆಳವಣಿಗೆಗಳು ಹಾಗೂ ಮಹಿಳಾ ಶಾಸಕರ ಪೈಪೋಟಿಯಿಂದಾಗಿ ಪ್ರಮಾಣವಚನ ಸ್ವೀಕರಿಸಲಿಲ್ಲ.
Read Moreಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಂಡಾಯದ ಕಿಡಿ: ಸಾಲು ಸಾಲು ರಾಜೀನಾಮೆಗೆ ಮುಂದಾದ ಶಾಸಕರು
ಕರ್ನಾಟಕ ಕಾಂಗ್ರೆಸ್ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ಬೇಳೂರು ಗೋಪಾಲಕೃಷ್ಣ ಹಾಗೂ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಬೆದರಿಕೆ ಹಾಕಿದ್ದು, ರಾಜ್ಯಾದ್ಯಂತ ಸಚಿವ ಸ್ಥಾನ ವಂಚಿತರ ಬೆಂಬಲಿಗರಿಂದ ಪ್ರತಿಭಟನೆಗಳು ತೀವ್ರಗೊಂಡಿವೆ.
Read More
