ದಕ್ಷಿಣ ಕನ್ನಡ
ಆ.8ರಂದು ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ಪುತ್ತೂರು ಉವಿಭಾಗದ ತಹಶೀಲ್ದಾರ್ ಮನವಿ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ಆ.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Read Moreಕಲ್ಲಡ್ಕ ಶ್ರೀರಾಮ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಉಮೇಶ್ ಸಾಲಿಯಾನ್ ಆಯ್ಕೆ
ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-27ನೇ ಸಾಲಿನ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆದಿದ್ದು, ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನ ನೀಡಿದರು ಹಾಗೂ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
Read Moreಮೋಂತಿಮಾರಿನಲ್ಲಿ ಆ.9ರಂದು ಆಧಾರ್, ಆಯುಷ್ಮಾನ್, ಆರೋಗ್ಯ ವಿಮೆ, ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ, ಬೇಕಾದ ದಾಖಲೆಗಳು ಹೀಗಿವೆ
ಬಂಟ್ವಾಳದ ಮೋಂತಿಮಾರಿನಲ್ಲಿ ಆ.9ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಆಯುಷ್ಮಾನ್ ಕಾರ್ಡ್, ಆರೋಗ್ಯ ವಿಮೆ, ಅಪಘಾತ ವಿಮೆ, ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ ಹಾಗೂ ಉಚಿತ ಸಸಿ ವಿತರಣೆ ಕಾರ್ಯಕ್ರಮ ನಡೆಯಲಿದೆ.
Read Moreಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕೊಡಿಪ್ಪಾಡಿ-ಕುಳ ಘಟಕದ ವತಿಯಿಂದ ಆ.9ರಂದು ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕೊಡಿಪ್ಪಾಡಿ-ಕುಳ ಘಟಕದ ವತಿಯಿಂದ ಆಗಸ್ಟ್ 9ರಂದು ಪುತ್ತೂರಿನ ಓಜಾಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ. ಕಣ್ಣು, ಕಿವಿ, ಮೂಗು, ದಂತ, ಚರ್ಮ, ಎಲುಬು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಸೌಲಭ್ಯ ಲಭ್ಯ.
Read Moreಪುತ್ತೂರು: ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ; ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುತ್ತೂರಿನ ತೆಂಕಿಲದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 6 ವಿದ್ಯಾರ್ಥಿಗಳು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಮಹಾಲಿಂಗೇಶ್ವರ ಸನ್ನಿಧಿಯಲ್ಲಿ 30 ಕೋಟಿ ರೂ. ಮೌಲ್ಯದ ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ಯೋಜನೆ; ಶಾಸಕ ಅಶೋಕ್ ರೈ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ₹30 ಕೋಟಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸುವ ಶಾಸಕ ಅಶೋಕ್ ಕುಮಾರ್ ರೈ ನಿರ್ಧಾರಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ವಾಹನ ದಟ್ಟಣೆ ನಿಯಂತ್ರಣಕ್ಕೆ ರಸ್ತೆ ಅಗತ್ಯ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
Read Moreಕೊಚ್ಚಿಯಲ್ಲಿ ಎನ್ಐಎ ಭರ್ಜರಿ ಬೇಟೆ: ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹಂತಕ ಕೊನೆಗೂ ಖೆಡ್ಡಾಗೆ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 4 ಲಕ್ಷ ರೂ. ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ನನ್ನು ಎನ್ಐಎ ಕೊಚ್ಚಿಯಲ್ಲಿ ಬಂಧಿಸಿದೆ.
Read Moreಸುಳ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ನಿರ್ಮಾಣಕ್ಕೆ ಆಗ್ರಹ: ಶಾಸಕರು, ಮೆಸ್ಕಾಂಗೆ ಭಾರತೀಯ ಮಜ್ದೂರ್ ಸಂಘ ಮನವಿ
ಸುಳ್ಯ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಬೇಕೆಂದು ಭಾರತೀಯ ಮಜ್ದೂರ್ ಸಂಘದ ಆಟೋ ಚಾಲಕರ ಘಟಕ ಸ್ಥಳೀಯ ಶಾಸಕರು ಹಾಗೂ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
Read Moreಸೇವಾ ನಿವೃತ್ತ ಯೋಧರ ಪರ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಶ್ವತ ಪರಿಹಾರಕ್ಕೆ ಒತ್ತಾಯ
ಲೋಕಸಭೆಯಲ್ಲಿ ನಿಯಮ 377ರಡಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ECHS ಯೋಜನೆಯಡಿ ನಿವೃತ್ತ ಯೋಧರಿಗೆ ಚಿಕಿತ್ಸೆ ಪಡೆಯುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಆಸ್ಪತ್ರೆಗಳ ಕ್ಲೈಮ್ಗಳ ಸಕಾಲ ವಿಲೇವಾರಿ ಹಾಗೂ ಶಾಶ್ವತ ಪರಿಹಾರಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
Read Moreಕಾವು ಭೀಕರ ಅಪಘಾತ: 2 ಮೀಟರ್ ದೂರಕ್ಕೆ ವಿದ್ಯುತ್ ಕಂಬ ಎತ್ತೊಯ್ದ ಕಾರು!
ಪುತ್ತೂರಿನ ಕಾವು ಕುಡ್ಪುನಡ್ಕದಲ್ಲಿ ಮಾರತಿ ಸುಜುಕಿ ಫ್ರಾಂಕ್ಸ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬವನ್ನು ಎರಡು ಮೀಟರ್ ದೂರಕ್ಕೆ ಎತ್ತೊಯ್ದ ಘಟನೆ ಆ.4ರಂದು ಬೆಳಗ್ಗೆ ಸಂಭವಿಸಿದೆ.
Read More
